
ಹಿರಿಯೂರು :
ಜನಸೇವೆಯೇ ನನ್ನ ಜೀವನದ ಧ್ಯೇಯವಾಗಿದ್ದು, ಜನರ ಪ್ರೀತಿ-ವಿಶ್ವಾಸ ಗಳಿಸುವುದು ನಿಜವಾದ ನಾಯಕತ್ವ, ಈ ನಿಟ್ಟಿನಲ್ಲಿ ಹಿರಿಯೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ಜನಸೇವೆ ಮಾಡಬೇಕೆಂದು ಇಚ್ಛಿಸಿರುವ ನನಗೆ ನಿಮ್ಮ ಬೆಂಬಲ ಅಗತ್ಯವಾಗಿದೆ ಎಂಬುದಾಗಿ ಹಿರಿಯೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಬೊಮ್ಮನಹಳ್ಳಿಬಾಬಣ್ಣ ಹೇಳಿದರು.
ನಗರದ ಶ್ರೀತೇರುಮಲ್ಲೇಶ್ವರಸ್ವಾಮಿ ದೇವಸ್ಥಾನದಲ್ಲಿ ಶ್ರೀತೇರುಮಲ್ಲೇಶ್ವರಸ್ವಾಮಿಗೆ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಿ, ನಂತರ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಬೊಮ್ಮನಹಳ್ಳಿಬಾಬಣ್ಣರವರ ಅಭಿಮಾನಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
