July 29, 2026
07

ಹಿರಿಯೂರು :     

ಸಮಾಜದ ಜನರಿಗೆ ಉತ್ತಮ ಸಂದೇಶಗಳನ್ನು ಸಾರುವ ಮೂಲಕ ಜನರನ್ನು ಸನ್ಮಾರ್ಗದಲ್ಲಿ ನಡೆಯುವಂತೆ ಪ್ರೇರೇಪಿಸುತ್ತಾ, ಸದಾ ಸಮಾಜದ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಪರಮಪೂಜ್ಯರು, ಆದಿಜಾಂಬವ ಮಹಾಸಂಸ್ಥಾನಮಠದ ಪೀಠಾಧ್ಯಕ್ಷರಾದ ಶ್ರೀಷಡಕ್ಷರಮುನಿ ಮಹಾಸ್ವಾಮೀಜಿಯವರಿಗೆ “ಹಿರಿಯೂರುನ್ಯೂಸ್” ತಂಡದ ವತಿಯಿಂದ ಭಕ್ತಿ ಪೂರ್ವಕವಾಗಿ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.

ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ಪೂಜ್ಯರಾದ ಶ್ರೀಷಡಕ್ಷರಿಮುನಿಸ್ವಾಮೀಜಿಯವರಿಗೆ ಆ ಭಗವಂತ ಆರೋಗ್ಯ–ಆಯಸ್ಸಿನ ಜೊತೆಗೆ ಯಶಸ್ಸನ್ನು ಕೊಟ್ಟು ಕಾಪಾಡಲಿ ಎಂಬುದಾಗಿ ಅವರ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆ ರಂಗನಾಥ್ ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್ ಉಮೇಶ್ ಯಾದವ್, ಪರಮೇಶ್ವರಪ್ಪ, ವೆಂಕಟೇಶ್, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಭಕ್ತಿ ಪೂರ್ವಕವಾಗಿ ಶುಭಕೋರಿದ್ದಾರೆ.

About The Author

Leave a Reply

Your email address will not be published. Required fields are marked *