

ಹಿರಿಯೂರು :
ನಗರದ ಪೊಲೀಸ್ ಠಾಣೆಯ ಸಿಬ್ಬಂದಿಗಳು ದಸರಾ ಹಬ್ಬದ ಅಂಗವಾಗಿ ಸಾಂಪ್ರದಾಯಿಕ ಉಡುಗೆಯಲ್ಲಿ ಭಾಗವಹಿಸಿ ಸಂಭ್ರಮಿಸಿದರು. ಠಾಣೆಯ ಸಿ.ಪಿ.ಐ. ರಾಘವೇಂದ್ರ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ಉಡುಗೆಯ ವೈವಿಧ್ಯತೆಯೊಂದಿಗೆ ಹಬ್ಬದ ಸಂತಸವನ್ನು ಹಂಚಿಕೊಂಡರು.

ಸಾಂಪ್ರದಾಯಿಕ ವೇಷಭೂಷಣ ತೊಟ್ಟು ದಸರಾ ಸಂಭ್ರಮದಲ್ಲಿ ಪಾಲ್ಗೊಂಡ ಪೊಲೀಸ್ ಸಿಬ್ಬಂದಿ, ಹಬ್ಬವು ಕೇವಲ ನಾಗರಿಕರದ್ದೇ ಅಲ್ಲದೆ, ಸೇವಾ ವೃತ್ತಿಯವರಿಗೂ ಸಮಾನ ಸಂತೋಷ ನೀಡುತ್ತದೆ ಎಂಬ ಸಂದೇಶವನ್ನು ನೀಡಿದರು.

ಈ ಕಾರ್ಯಕ್ರಮದಲ್ಲಿ ಸಿ.ಪಿ.ಐ. ರಾಘವೇಂದ್ರ ಹಾಗೂ ಠಾಣೆಯ ಎಲ್ಲಾ ಸಿಬ್ಬಂದಿಗಳು ಪಾಲ್ಗೊಂಡು ಹಬ್ಬದ ಸಂಭ್ರಮವನ್ನು ಹೆಚ್ಚಿಸಿದರು.