
ಹಿರಿಯೂರು :
ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಕರ್ನಾಟಕ ಸರ್ಕಾರದ ಮಾನ್ಯ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಪ್ರಕೃತಿ ವಿಕೋಪ ಪರಿಹಾರ ಕಾರ್ಯಗಳ ಉಸ್ತುವಾರಿ ಸಚಿವರಾದ ಸನ್ಮಾನ್ಯ ಟಿ.ರಘುಮೂರ್ತಿ ಅವರು ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ಪ್ರಕೃತಿ ವಿಕೋಪ ಪರಿಹಾರ ಕಾರ್ಯಗಳ ಉಸ್ತುವಾರಿ ಸಚಿವರಾದ ಸನ್ಮಾನ್ಯ ಟಿ.ರಘುಮೂರ್ತಿಯವರು ಮಾತನಾಡಿ, ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಸಂವಿಧಾನದ ಮೌಲ್ಯಗಳಿಗಾಗಿ ಬಾಬಾಸಾಹೇಬ್ ಅಂಬೇಡ್ಕರ್ ಅವರು ತೋರಿದ ಮಾರ್ಗ ಸದಾ ನಮ್ಮೆಲ್ಲರಿಗೂ ಪ್ರೇರಣೆಯಾಗಿದೆ ಎಂಬುದಾಗಿ ಹೇಳಿದರು.
ಈ ಕಾರ್ಯಕ್ರಮದಲ್ಲಿ ಚಿತ್ರದುರ್ಗ ಶಾಸಕರಾದ ಸನ್ಮಾನ್ಯ ಕೆ.ಸಿ.ವೀರೇಂದ್ರಪಪ್ಪಿ, ಸುಹಾಸ್ ಸುಧಾಕರ್, ರಾಜ್ಯ ಭೋವಿ ನಿಗಮದ ಅಧ್ಯಕ್ಷ ರಾಮಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ಕಾಂಗ್ರೆಸ್ ಮುಖಂಡರುಗಳಾದ ಕೃಷ್ಣಮೂರ್ತಿ ಸೂರಗೊಂಡನಹಳ್ಳಿ, ಬಿ.ಹೆಚ್.ಮಂಜುನಾಥ್, ಈರಲಿಂಗೇಗೌಡ, ಶಿವಕುಮಾರ್, ಅನಿಲ್ ಪಾಳೇಗಾರ, ಜೋಗಪ್ಪ, ಶ್ರೀನಿವಾಸ್ ಮಾಳಿಗೆ, ಸೇರಿದಂತೆ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
