September 13, 2026
002

ಹಿರಿಯೂರು :

ನಗರದ ತಮಿಳು ಸಮುದಾಯದ ಮುಖಂಡರು, ಕಾರ್ಯಕರ್ತರು, ಭಕ್ತರು ಹಾಗೂ ಬಂಧುಗಳು ತೋರಿದ ಪ್ರೀತಿ ಮತ್ತು ಆತ್ಮೀಯತೆಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು ಎಂಬುದಾಗಿ ಸುಹಾಸ್ ಸುಧಾಕರ್ ಹೇಳಿದರು.

ಕಾವಡಿ ಹಬ್ಬದ ಪ್ರಯುಕ್ತ ತಾಲ್ಲೂಕಿನ ತಮಿಳು ಸಮುದಾಯದ ಮುಖಂಡರು ಹಾಗೂ ಕಾರ್ಯಕರ್ತರ ಮನೆಗಳಿಗೆ ಭೇಟಿ ನೀಡಿ, ಹಬ್ಬದ ಶುಭಾಶಯಗಳನ್ನು ತಿಳಿಸಿ, ಮಾತನಾಡಿದರು.

ನಂತರ ತಂಗಮಲೈ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಆಶೀರ್ವಾದ ಸ್ವೀಕರಿಸಿ, ನಾಡಿನ ಜನತೆಗೆ ಸುಖ, ಶಾಂತಿ, ಆರೋಗ್ಯ ಹಾಗೂ ಸಮೃದ್ಧಿ ದೊರೆಯಲಿ ಎಂಬುದಾಗಿ ತಂಗಮಲೈ ದೇವರಲ್ಲಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತರೊಂದಿಗೆ ಸುಹಾಸ್ ಸುಧಾಕರ್ ರವರು ಆತ್ಮೀಯವಾಗಿ ಮಾತನಾಡಿ, ಅವರ ಕುಶಲೋಪರಿ ವಿಚಾರಿಸಿ, ಭಕ್ತಿಪೂರ್ವಕವಾಗಿ ಪ್ರಸಾದವನ್ನು ಸ್ವೀಕರಿಸಿದರು.

About The Author

Leave a Reply

Your email address will not be published. Required fields are marked *