
ಹಿರಿಯೂರು :
ಕನ್ನಡ ಚಲನಚಿತ್ರರಂಗದ ಹೆಸರಾಂತ ನಟ ಡಾ.ವಿಷ್ಣುವರ್ಧನ್ ರವರನ್ನು ಮದುವೆಯಾಗಿ ದಾಂಪತ್ಯ ಜೀವನ ಪ್ರವೇಶಿಸಿದ ಇವರು ಕನ್ನಡ ಚಿತ್ರರಂಗದಲ್ಲಿ ತಮ್ಮ ಅಮೋಘ ಅಭಿನಯದ ಮೂಲಕ ಜನಮನ ಗೆದ್ದು, ಹಲವಾರು ಸಿನಿಮಾಗಳಲ್ಲಿ ನಟಿಸುವ ಮೂಲಕ ತಮಗೆ ಕೊಟ್ಟಿರುವ ಪಾತ್ರಕ್ಕೆ ಜೀವ ತುಂಬುತ್ತಿದ್ದ ಕನ್ನಡದ ಹೆಸರಾಂತ ನಟಿ ಭಾರತಿ ವಿಷ್ಣುವರ್ಧನ್ ರವರಿಗೆ “ಹಿರಿಯೂರುನ್ಯೂಸ್” ತಂಡದಿಂದ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.
ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ಚಲನಚಿತ್ರನಟಿ ಭಾರತಿ ವಿಷ್ಣುವರ್ಧನ್ ರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ, ಆಯಸ್ಸು ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭಹಾರೈಸಿದ್ದಾರೆ.
