October 6, 2025
00008

ಹಿರಿಯೂರು:

ತಾಲ್ಲೂಕಿನಲ್ಲಿ ಯಾವುದೇ ಸಮಸ್ಯೆಯಿಲ್ಲದೆ ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯ ನಿರ್ವಹಿಸುತ್ತಿರುವುದು ಸಂತಸ ತಂದಿದೆ. ತಾಲ್ಲೂಕಿನ ಬೇತೂರು, ರಂಗೇನಹಳ್ಳಿ 5ಸಾವಿರ ಹಾಗೂ ಬ್ಯಾಡರಹಳ್ಳಿ ಸಹಕಾರ ಸಂಘ 3 ಸಾವಿರ ಹಾಲು ಉತ್ಪಾದನೆ ಹಿನ್ನೆಲೆಯಲ್ಲಿ ಮೂರು ಬಿ.ಎಂ.ಸಿ. ಕೇಂದ್ರಗಳನ್ನು ಮಂಜೂರು ಮಾಡಲಾಗಿದೆ ಎಂಬುದಾಗಿ ಶಿಮುಲ್ ನಿರ್ದೇಶಕರಾದ ಬಿ.ಸಿ.ಸಂಜೀವಮೂರ್ತಿ  ಅವರು ಹೇಳಿದರು.

ನಗರದ ಅನ್ನಪೂರ್ಣೇಶ್ವರಿ ಖಾಸಗಿ ಹೋಟೆಲ್ ನಲ್ಲಿ ತಾಲ್ಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

 ಮುಂದಿನ ದಿನಗಳಲ್ಲಿ ಬೀರೆನಹಳ್ಳಿ ಗ್ರಾಮದಲ್ಲೂ ಬಿ.ಎಂ.ಸಿ. ಕೇಂದ್ರ ತೆರೆಯಲು ಚಿಂತನೆ ನಡೆಸಲಾಗುವುದು. ಹೈನುಗಾರಿಕೆ ರೈತರ ಉಪಕಸುಬಾಗಿದ್ದು ಅವರ ಕುಟುಂಬ ನಿರ್ವಹಣೆಗೆ ಬಹಳ ಉಪಯುಕ್ತವಾಗಿದೆ. ಪ್ರತಿಯೊಬ್ಬರೂ  ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂಬುದಾಗಿ ಅವರು ಹೇಳಿದರು.

ಸಹಾಯಕ ನಿರ್ದೇಶಕರಾದ ಎಂ.ಪುಟ್ಟರಾಜು ಅವರು ಹಾಲು ಉತ್ಪಾದಕರ ಸಹಕಾರ ಸಂಘಗಳ ವಾರ್ಷಿಕ ವರದಿ, ಲೆಕ್ಕಪತ್ರ, ಅಡಿಟ್ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ  ವಿಸ್ತರಣಾಧಿಕಾರಿ ಜಿ. ಕೃಷ್ಣಕುಮಾರ್, ಪಶುವೈದ್ಯದೀರಾಜ್ ಪ್ರಕಾಶ್ ಜಿ, ಸೂಪರ್ವೈಸರ್ ಮಂಜುನಾಥ್ ಸೇರಿದಂತೆ ತಾಲ್ಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳು  ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *