
ಹಿರಿಯೂರು :
ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ನೀಡಿದ ಅಮೂಲ್ಯ ಸಲಹೆ–ಅಭಿಪ್ರಾಯಗಳನ್ನು ಸ್ವೀಕರಿಸಿ, ಎಲ್ಲರ ಸಹಕಾರದೊಂದಿಗೆ ಸಂಘಟನೆಯನ್ನು ಇನ್ನಷ್ಟು ಬಲಪಡಿಸಿ, ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಾ ಸದಾ ಜನಪರವಾಗಿ ಕಾರ್ಯನಿರ್ವಹಿಸುವ ಸಂಕಲ್ಪ ಮಾಡಿದ್ದೇನೆ ಎಂಬುದಾಗಿ ಸುಹಾಸ್ ಸುಧಾಕರ್ ಹೇಳಿದರು.
ತಾಲೂಕಿನ ಕೆ.ಆರ್.ಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಭೆ ನಡೆಸಿ, ಸ್ಥಳೀಯ ಸಮಸ್ಯೆಗಳು, ಸಾರ್ವಜನಿಕರ ಅಗತ್ಯಗಳು ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಸಂಘಟನಾತ್ಮಕ ಚಟುವಟಿಕೆಗಳ ಕುರಿತು ಸವಿಸ್ತಾರವಾಗಿ ಚರ್ಚಿಸಿ, ಮಾತನಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
