
ಹಿರಿಯೂರು :
ಇನ್ಫೋಸಿಸ್ ಸಂಸ್ಥೆಯನ್ನು ಸ್ಥಾಪಿಸುವ ಮೂಲಕ ಲಕ್ಷಾಂತರ ಜನರಿಗೆ ಉದ್ಯೋಗ ನೀಡುವ ಜೊತೆಗೆ ತಮ್ಮ ಸಂಸ್ಥೆಯ ಮೂಲಕ ಲಕ್ಷಾಂತರ ಜನರಿಗೆ ಸಹಾಯಹಸ್ತವನ್ನು ನೀಡುತ್ತಿರುವ ಸರಳತೆ, ಸಜ್ಜನಿಕೆ, ಸಹೃದಯ ವ್ಯಕ್ತಿತ್ವದ ಇನ್ಫೋಸಿಸ್ ಸಂಸ್ಥೆಯ ಸಂಸ್ಥಾಪಕರಾದ ಎನ್.ಆರ್.ನಾರಾಯಣಮೂರ್ತಿ ರವರಿಗೆ “ಹಿರಿಯೂರುನ್ಯೂಸ್” ತಂಡದಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.
ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ಎನ್.ಆರ್.ನಾರಾಯಣಮೂರ್ತಿರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ ಆಯಸ್ಸು ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭಹಾರೈಸಿದ್ದಾರೆ.
