
ಹಿರಿಯೂರು :
ಇಂದಿನ ಒತ್ತಡದ ಜೀವನಶೈಲಿಯಿಂದ ಯುವಜನತೆಯ ಕಾಪಾಡಲು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕ್ರೀಡೆಗಳು ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆಯ ವತಿಯಿಂದ ಕ್ರೀಡೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ವಿದ್ಯಾರ್ಥಿಗಳು ಉತ್ತಮವಾಗಿ ಆಡುವ ಮೂಲಕ ಗೆಲುವು ಸಾಧಿಸಬೇಕು ಎಂಬುದಾಗಿ ಶ್ರೀಬಸವರಾಜ್ ಎಜುಕೇಶನ್ ಟ್ರಸ್ಟನ ಟ್ರಸ್ಟಿಗಳಾದ ಶ್ರೀರಂಗಪ್ಪನವರು ಕ್ರೀಡಾಪಟುಗಳಿಗೆ ಶುಭಹಾರೈಸಿದರು .
ನಗರದ ಹೊರವಲಯದಲ್ಲಿರುವ ಶ್ರೀ ಬಸವರಾಜ್ ಎಜುಕೇಶನ್ ಟ್ರಸ್ಟ, ಶ್ರೀಬಸವರಾಜ್ ಅಲೈಡ್ ಹೆಲ್ತ್ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಇವರ ನೇತೃತ್ವದಲ್ಲಿ ಡಾ.ಬಿ.ಬಸವರಾಜ್ ಅವರ ಸ್ಮರಣಾರ್ಥವಾಗಿ ಹಮ್ಮಿಕೊಳ್ಳಲಾಗಿದ್ದ 2025-2026ನೇ ಸಾಲಿನ ಕ್ರೀಡೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ, ನಂತರ ಅವರು ಮಾತನಾಡಿದರು.
ಹಿರಿಯೂರು ತಾಲೂಕಿನ ಅರಣ್ಯವಲಯ ಅಧಿಕಾರಿ ವಸಂತಕುಮಾರ್ ಮಾತನಾಡಿ, ಕ್ರೀಡೆಗಳು ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಬಹಳ ಮುಖ್ಯವಾಗಿದೆ ಮತ್ತು ಕ್ರೀಡೆಗಳನ್ನು ಆಡುವುದರಿಂದ ವಿದ್ಯಾರ್ಥಿಗಳಲ್ಲಿ ಶಿಸ್ತಿನ ಮನೋಭಾವ ಮತ್ತು ಸಮಯ ನಿರ್ವಹಣೆಯ ಕೌಶಲ್ಯಗಳು ಬೆಳೆಯುತ್ತವೆ ಎಂಬುದಾಗಿ ಹೇಳಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಸಂದೀಪ್ ಯಾದವ್ ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಬಸವರಾಜ್ ಶಾಲೆಯ ಮುಖ್ಯೋಪಾಧ್ಯಾಯಿನಿ ಸ್ಪಂದನ, ಉಮೇಶ್, ದರ್ಶನ್ ಸೇರಿದಂತೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಆರಂಭದಲ್ಲಿ ಉಪನ್ಯಾಸಕರಾದ ಎಂ.ಜಿ.ಭಾವನ ಕಾರ್ಯಕ್ರಮ ನಿರೂಪಿಸಿದರು, ರಾಧಿಕಾ ಸ್ವಾಗತಿಸಿದರು, ಸಿಂಧು ವಂದಿಸಿದರು.
