September 12, 2026
000003

ಹಿರಿಯೂರು :

ಪ್ರತಿದಿನ ತರಗತಿಯಲ್ಲಿ ಸುಮಾರು ಐದಾರು ಗಂಟೆಗಳ ಕಾಲ ನಿಂತು ಬೋಧಿಸುವ ಶಿಕ್ಷಕರು ದೈಹಿಕ ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯಂತ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಶಿಕ್ಷಕರು ಪ್ರತಿನಿತ್ಯ ಕ್ರೀಡೆ, ಯೋಗ, ಧ್ಯಾನದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ದೈಹಿಕವಾಗಿ ಸದೃಢರಾಗಬೇಕು ಎಂಬುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ.ಎಂ.ತಿಪ್ಪೇಸ್ವಾಮಿ ಹೇಳಿದರು.

ನಗರದ ತಾಲೂಕಿನ ಕ್ರೀಡಾಂಗಣದಲ್ಲಿ ತಾಲೂಕಿನ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕ-ಶಿಕ್ಷಕಿಯರುಗಳಿಗೆ ಆಯೋಜಿಸಲಾಗಿದ್ದ ಕ್ರೀಡಾಕೂಟವನ್ನು ಉದ್ಘಾಟಿಸಿ, ಅವರು ಮಾತನಾಡಿದರು.

ಇಂದಿನ ಒತ್ತಡದ ಬದುಕಿನಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ಹೃದಯಾಘಾತದಿಂದ ಮೃತಪಟ್ಟಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಆರೋಗ್ಯಕ್ಕೆ ಹೆಚ್ಚಿ ಆದ್ಯತೆ ನೀಡುವುದು ಅನಿವಾರ್ಯವಾಗಿದೆ, ಈ ನಿಟ್ಟಿನಲ್ಲಿ ಆರೋಗ್ಯ ಸುರಕ್ಷತೆಗಾಗಿ ಕನಿಷ್ಠ ವರ್ಷಕ್ಕೆ 3 ಬಾರಿಯಾದರೂ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅತ್ಯಗತ್ಯವಾಗಿದೆ ಎಂಬುದಾಗಿ ಅವರು ಹೇಳಿದರು.

ಇದೇ ಸಂದರ್ಭದಲ್ಲಿ ಆಡವಾಡಿ ದಣಿದ ಶಿಕ್ಷಕ-ಶಿಕ್ಷಕಿಯರಿಗೆ ರೆಡ್ ಫೌಂಡೇಶನ್ ವತಿಯಿಂದ ಕ್ರೀಡಾಪಟುಗಳಿಗೆ ಜೂಸ್ ವ್ಯವಸ್ಥೆಯನ್ನು ಮಾಡಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಆರ್.ಟಿ.ಶ್ರೀನಿವಾಸ್ ಹಾಗೂ ದೈಹಿಕ ಶಿಕ್ಷಣ ಪರಿವೀಕ್ಷಕ ಜಗದೀಶ್ ನಿಕಟಪೂರ್ವ ದೈಹಿಕ ಶಿಕ್ಷಣ ಪರಿವೀಕ್ಷಕರಾದ ರವೀಂದ್ರ ನಾಯಕ, ಶಿಕ್ಷಣ ಸಂಯೋಜಕ ಶಿವಾನಂದ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀಮತಿ ಸುನಂದಮ್ಮ, ಕಾರ್ಯದರ್ಶಿ ಕೋಟಿ ಲಿಂಗಯ್ಯ, ಸರ್ಕಾರಿ ನೌಕರರ ಸಂಘದ ಖಜಾಂಚಿಗಳಾದ ಶ್ರೀನಿವಾಸ್ ಹಾಗೂ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾದ ರಾಜಣ್ಣ, ಜಿಲ್ಲಾ ಖಜಾಂಚಿಯಾದ ಶಿವಮೂರ್ತಿ, ಜಿಲ್ಲಾ ಸಹ ಕಾರ್ಯದರ್ಶಿಗಳಾದ ಹನುಮಂತರೆಡ್ಡಿ, ರಾಜ್ಯ ಗ್ರೇಟ್ ಟು ದೈಹಿಕ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ಮಹೇಶ್, ಜಿಲ್ಲಾ ಪ್ರಾಥಮಿಕ ಶಾಲಾ ಬಡ್ತಿ ಮುಖ್ಯ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ  ರಮೇಶ್ ನಾಯಕ್, ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರಾದ ಚಂದ್ರ ನಾಯಕ್ ಹಾಗೂ ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಶಿವಮೂರ್ತಿ ಹಾಗೂ ಪ್ರಾಥಮಿಕ ಶಾಲಾ ಗ್ರೇಟ್ ಟು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಎಚ್.ನಾಗರಾಜ್, ಸಾವಿತ್ರಿಬಾಯಿ ಪುಲೆ ಸಂಘದ ಅಧ್ಯಕ್ಷರಾದ ಶ್ರೀಮತಿ ಸ್ವಪ್ನ, ಶಾಲಾ ಶಿಕ್ಷಣ ಇಲಾಖೆಯ ಸಂಘದ ಅಧ್ಯಕ್ಷರಾದ ಸೋಮಶೇಖರ್, ರೆಡ್ ಫೌಂಡೇಶನ್ ಸಂಸ್ಥಾಪಕರಾದ ರಾಮಕೃಷ್ಣ ಮತ್ತು ಕಾರ್ಯದರ್ಶಿಗಳಾದ ಕೆ.ಅಂಬಿಕಾ ಹಾಗೂ ಖಜಾಂಚಿ ದಯಾನಂದ ಸೇರಿದಂತೆ ತಾಲ್ಲೂಕಿನ ಶಿಕ್ಷಕ-ಶಿಕ್ಷಕಿಯರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *