
ಹಿರಿಯೂರು :
ವಿದ್ಯಾರ್ಥಿಗಳನ್ನು ಈ ದೇಶದ ಸತ್ಪ್ರಜೆಗಳಾಗಿ ನಿರ್ಮಾಣ ಮಾಡುವ ಹಾಗೂ ಸಮಾಜವನ್ನು ಮುಖ್ಯವಾಹಿನಿಗೆ ತರುವಲ್ಲಿ ಶಿಕ್ಷಕ-ಶಿಕ್ಷಕಿಯರ ಜವಾಬ್ದಾರಿ ಅತ್ಯಂತ ಮಹತ್ವದ್ದಾಗಿದ್ದು, ಇಂತಹ ಗುರುವೃಂದವನ್ನು ಇಂದು ನಾವುನೀವೆಲ್ಲರೂ ಸ್ಮರಿಸಬೇಕಿದೆ ಎಂಬುದಾಗಿ ವಾಣಿವಿಲಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಆಲೂರು ಹನುಮಂತರಾಯಪ್ಪ ಹೇಳಿದರು.
ನಗರದ ವಾಣಿವಿಲಾಸ ವಿದ್ಯಾಸಂಸ್ಥೆಯ ಆವರಣದಲ್ಲಿ “ಶಿಕ್ಷಕರ ದಿನಾಚರಣೆ” ಅಂಗವಾಗಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಸಾವಿತ್ರಿಬಾಯಿಫುಲೆಯವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ, ನಂತರ ಅವರು ಮಾತನಾಡಿದರು.

ಆದರ್ಶ ಶಿಕ್ಷಕರೆಂದೇ ಹೆಸರಾದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರವರ ಹುಟ್ಟುಹಬ್ಬವನ್ನು ದೇಶಾದ್ಯಂತ ಶಿಕ್ಷಕರ ದಿನಾಚರಣೆಯಾಗಿ ಆಚರಣೆ ಮಾಡಲಾಗುತ್ತಿದ್ದು, ಇಂತಹ ಶಿಕ್ಷಕರ ದಿನಾಚರಣೆಯಂದು ನಿಮ್ಮ ಭವಿಷ್ಯವನ್ನು ಉಜ್ವಲಗೊಳಿಸಲು ಶ್ರಮಿಸುತ್ತಿರುವ ನಮ್ಮ ಎಲ್ಲಾ ಶಿಕ್ಷಕ-ಶಿಕ್ಷಕಿಯರನ್ನು ಗೌರವಿಸಬೇಕಿದೆ ಎಂಬುದಾಗಿ ಹೇಳಿದರು.

ಇದೇ ಸಂದರ್ಭದಲ್ಲಿ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕರಾದ ಶ್ರೀಮತಿ ಸೌಮ್ಯ, ವ್ಯವಸ್ಥಾಪಕಿ ಶ್ರೀಮತಿ ವಸಂತಾ, ಆಡಳಿತಾಧಿಕಾರಿ ಶ್ರೀಮತಿ ಹೇಮಲತಾ, ಶಿಕ್ಷಕ ಉಮೇಶ್ ಯಾದವ್, ಶಿಕ್ಷಕಿಯರುಗಳಾದ ರಜಿಯಾ, ಗಂಗಮ್ಮ, ರಂಜಿತಾ,ಇವರುಗಳನ್ನು ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಲಾಯಿತು. ಶಿಕ್ಷಕಿ ಶ್ರೀಮತಿ ಸಾಧಿಕಾರವರಿಗೆ ಇನ್ಸೆಂಟಿವ್ 5ಸಾವಿರ ರೂಗಳನ್ನು ನೀಡಿ ಗೌರವಿಸಲಾಯಿತು.

ಈ ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕರಾದ ಶ್ರೀಮತಿ ಸೌಮ್ಯ, ವ್ಯವಸ್ಥಾಪಕಿ ಶ್ರೀಮತಿ ವಸಂತಾ, ಆಡಳಿತಾಧಿಕಾರಿ ಶ್ರೀಮತಿ ಹೇಮಲತಾ, ಶಿಕ್ಷಕಿಯರುಗಳಾದ ರಜಿಯಾ, ಗಂಗಮ್ಮ, ರಂಜಿತಾ, ಮುಬೀನಾ, ಸಾಧಿಕಾ, ಮಮತಾ, ಅಫ್ರೀನ್, ಕಾರ್ಯಕ್ರಮ ಸಂಯೋಜಕರಾದ ಭಾಗ್ಯ, ಪೂಜಾ, ಜಯಸುಧಾ, ಸುಲೋಚನಾ, ಶಿಕ್ಷಕ ಉಮೇಶ್ ಯಾದವ್, ಶಿವರಾಜ್ ನಾಯಕ್, ಸೇರಿದಂತೆ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
