
ಹಿರಿಯೂರು:
ದಾವಣಗೆರೆ ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಪುರುಷ ಮತ್ತು ಮಹಿಳಾ ವಿಭಾಗದ ಬ್ಯಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ ವಾಣಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪುರುಷರ ವಿಭಾಗವು ತೃತಿಯ ಸ್ಥಾನ ಗಳಿಸಿ, ಕಾಲೇಜಿನ ಕೀರ್ತಿ ಪತಾಕೆಯನ್ನು ದಾವಣಗೆರೆ ವಿಶ್ವವಿದ್ಯಾಲಯ ಮಟ್ಟದಲ್ಲಿ ಹಾರಿಸಿ, ಕಾಲೇಜಿಗೆ ಹೆಸರು ತಂದು ಕೊಟ್ಟಿದೆ ಎಂಬುದಾಗಿ ವಾಣಿ ಸಕ್ಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಬಿ.ಆರ್.ಹೇಮಲತಾ ಸಂತಸ ವ್ಯಕ್ತಪಡಿಸಿದ್ದಾರೆ.

ನಗರದ ವಾಣಿ ಸಕ್ಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ನಂತರ ಅವರು ಮಾತನಾಡಿದರು.
ಕಾರ್ಯಕ್ರಮವು ಚಿತ್ರದುರ್ಗ ನಗರದ ಡಾನ್ ಬಾಸ್ಕೋ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಹಯೋಗದೊಂದಿಗೆ ದಾವಣಗೆರೆ ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಪುರುಷ ಮತ್ತು ಮಹಿಳಾ ಬ್ಯಾಸ್ಕೆಟ್ ಬಾಲ್ ಪಂದ್ಯಾವಳಿಯ ಕಾರ್ಯಕ್ರಮ ನಡೆಯಿತು ಎಂದು ಹೇಳಿದರು.

ಈ ವೇಳೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಜಿ.ವಿ.ಶ್ರೀಧರ್ ಯಾದವ್. ಸಹಾಯಕ ಪ್ರಾಧ್ಯಾಪಕರಾದ ಡಾ.ಆರ್.ಗಂಗಾಧರ, ಸಾದತ್, ಆರ್. ವಲಿ, ಬಸವರಾಜ್ ಟಿ. ಬೆಳಗಟ್ಟ, ಕೆ.ಎಚ್. ಮಹಾಂತೇಶ್, ಡಾ.ಎ.ದೇವಿಕ, ಬಿ.ಟಿ.ಭರತ್, ಎಸ್.ಎಲ್.ಮೂರ್ತಿ, ಲಕ್ಷ್ಮಣ್ ನಾಯಕ್. ಅಧೀಕ್ಷಕರಾದ ಪಿ.ಎನ್. ನರಸಿಂಹಮೂರ್ತಿ, ಡಾ.ಎ.ಚಿತ್ತಯ್ಯ, ಹಾಗೂ ಕಾಲೇಜಿನ ಬೋಧಕ ಮತ್ತು ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.
