
ಹಿರಿಯೂರು:
ನಗರದ ಎಲ್.ಐ.ಸಿ ಬಡಾವಣೆಯ ಗಣಪತಿ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಿರುವ ಶ್ರೀಶಾರದಾ ಗಣಪತಿಯ ದರ್ಶನ ಪಡೆದ ಅಟ್ಟಿಕಾ ಗೋಲ್ಡ್ ಕಂಪನಿಯ ಸಂಸ್ಥಾಪಕರಾದ ಬೊಮ್ಮನಹಳ್ಳಿಬಾಬು ಅವರು, ದೇವಸ್ಥಾನಕ್ಕೆ 50 ಸಾವಿರ ರೂಗಳ ಧನಸಹಾಯ ನೀಡಿದರು.

ಈ ಸಂದರ್ಭದಲ್ಲಿ ಶ್ರೀ ಶಾರದಾ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ, ದೇವರ ಆಶೀರ್ವಾದ ಪಡೆದ ಅವರು, ದೇವಸ್ಥಾನದ ಪದಾಧಿಕಾರಿಗಳು ಹಾಗೂ ಸ್ಥಳೀಯರೊಂದಿಗೆ ಮಾತುಕತೆ ನಡೆಸಿ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ಪಡೆದುಕೊಂಡರು.
ಇದೇ ಸಂದರ್ಭದಲ್ಲಿ ದೇವಸ್ಥಾನದ ಮುಂದಿನ ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯವಿರುವ ಸಹಕಾರ ಹಾಗೂ ಧನಸಹಾಯವನ್ನು ನೀಡುವುದಾಗಿ ಬೊಮ್ಮನಹಳ್ಳಿ ಬಾಬು ಅವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು, ಭಕ್ತರು, ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
