
ಹಿರಿಯೂರು :
ಕನ್ನಡದ ನಾಗರಹಾವು ಚಲನಚಿತ್ರದ ಮೂಲಕ ನಾಯಕನಟನಾಗಿ ಬೆಳ್ಳಿತೆರೆ ಪ್ರವೇಶಿಸಿದ ಇವರು ಬಂಧನ, ಕುಂತೀಪುತ್ರ, ಕಿಟ್ಟುಪುಟ್ಟು, ಆಪ್ತಮಿತ್ರ, ಆಪ್ತರಕ್ಷಕ ಹೀಗೆ ಹಲವಾರು ಯಶಸ್ವೀ ಚಲನಚಿತ್ರಗಳಲ್ಲಿ ನಟಿಸುವ ಮೂಲಕ ತಮ್ಮ ಅಮೋಘವಾದ ಅಭಿನಯದಿಂದ ಕನ್ನಡಿಗರ ಮನಗೆದ್ದು, ಕನ್ನಡ ಚಿತ್ರರಂಗಕ್ಕೆ ದಂತಕಥೆಯಾಗಿರುವ, ಸರಳತೆ, ಸಜ್ಜನಿಕೆ, ಸಹೃದಯ ವ್ಯಕ್ತಿತ್ವ ಹೊಂದಿದ್ದ ಅಭಿನಯ ಭಾರ್ಗವ, ಸಾಹಸಸಿಂಹ ಡಾ.ವಿಷ್ಣುವರ್ಧನ್ ರವರಿಗೆ “ಹಿರಿಯೂರು ನ್ಯೂಸ್” ತಂಡದ ವತಿಯಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.
ಡಾ.ವಿಷ್ಣುವರ್ಧನ್ ರವರು ಒಬ್ಬ ಕಲಾವಿದನಾಗಿ ಕನ್ನಡಚಿತ್ರರಂಗಕ್ಕೆ ನೀಡಿದ ಕಲಾಸೇವೆ ಅವಿಸ್ಮರಣೀಯವಾಗಿದೆ. ಅವರ ಹುಟ್ಟುಹಬ್ಬದ ಈ ಸಂದರ್ಭದಲ್ಲಿ ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ, ಆಯಸ್ಸು, ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ-ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭಹಾರೈಸಿದ್ದಾರೆ.
