

ಹಿರಿಯೂರು:
ನಗರದ ಮೂಲಭೂತ ಸೌಕರ್ಯಗಳ ಸುಧಾರಣೆಗೆ ಹಾಗೂ ನಾಗರೀಕರ ಸೌಲಭ್ಯಕ್ಕಾಗಿ ಈ ಯೋಜನೆಯುತುಂಬಾ ಮಹತ್ವದ ಹೆಜ್ಜೆಯಾಗಲಿದ್ದು, ನಗರದ ಸರ್ವಾಂಗೀಣ ಅಭಿವೃದ್ಧಿಯೇ ನಮ್ಮ ಕಾಂಗ್ರೆಸ್ ಸರ್ಕಾರದ ಉದ್ದೇಶವಾಗಿದೆ ಎಂಬುದಾಗಿ ಅವರು ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.
ನಗರದ ನಗರಸಭೆ ವ್ಯಾಪ್ತಿಯ ವಾರ್ಡ್ ನಂ.2ರಲ್ಲಿ ಚಳ್ಳಕೆರೆ ಮುಖ್ಯ ರಸ್ತೆಯ ಸರ್ವಿಸ್ ರಸ್ತೆಯಲ್ಲಿರುವ ಶ್ರೀವಿನಾಯಕ ಕಾಂಪ್ಲೆಕ್ಸ್ ಮುಂಭಾಗದಲ್ಲಿ ಸುಮಾರು 10ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಿಸುತ್ತಿರುವ ಇಂಟರ್ ಲಾಕ್ ಪೇವರ್ ಅಳವಡಿಸುವ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಿ, ನಂತರ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ಬಾಲಕೃಷ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿರಮೇಶ್, ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.