

ಹಿರಿಯೂರು:
ನಗರದ ಕಾಂಗ್ರೆಸ್ ಕಚೇರಿಯಲ್ಲಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರ ನೇತೃತ್ವದಲ್ಲಿ “ವೋಟ್ ಚೋರ್ ಗದ್ಧಿ ಚೋಡ್ ಸಹಿ ಸಂಗ್ರಹ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂಬುದಾಗಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ಜೆ.ರಮೇಶ್ ಹಾಗೂ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್. ಈರಲಿಂಗೇಗೌಡ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಎ.ಐ.ಸಿ.ಸಿ. ಉಸ್ತುವಾರಿಗಳಾದ ಮೈಸೂರ್ ಜೈ ಕುಮಾರ್, ಕೆ.ಪಿ.ಸಿ.ಸಿ. ಉಪಾಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿಗಳಾದ ಮುರುಳಿಧರ ಹಾಲಪ್ಪ, ಚಿತ್ರದುರ್ಗ ಜಿಲ್ಲಾ ಅಧ್ಯಕ್ಷರು ಹಾಗೂ ಕಾರ್ಯಾಧ್ಯಕ್ಷರು, ಚಿತ್ರದುರ್ಗ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಜನಪ್ರಿಯ ಶಾಸಕರುಗಳು, ಮಾಜಿ ವಿಧಾನ ಪರಿಷತ್ ಸದಸ್ಯರು, ಮಾಜಿ ಲೋಕಸಭಾ ಸದಸ್ಯರು, ಮಾಜಿ ವಿಧಾನ ಸಭಾ ಸದಸ್ಯರು, ಜಿಲ್ಲೆಯ ಎಲ್ಲಾ ನಿಗಮ ಮಂಡಳಿಯ ಅಧ್ಯಕ್ಷರುಗಳು, ಚಿತ್ರದುರ್ಗ ಜಿಲ್ಲಾ ಗ್ಯಾರಂಟಿ ಅದ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲೆಯ ಎಲ್ಲಾ ಸರ್ಕಾರಿ ನಾಮನಿರ್ದೇಶಿತ ಸದಸ್ಯರುಗಳು, ನಗರಸಭಾ ಅಧ್ಯಕ್ಷರು, ಉಪಾಧ್ಯಕ್ಷರು, ಎಲ್ಲಾ ಗೌರವಾನ್ವಿತ ಸದಸ್ಯರುಗಳು, ರಾಜ್ಯ ಮಟ್ಟದ ಪದಾಧಿಕಾರಿಗಳು, ಕೆ.ಪಿ.ಸಿ.ಸಿ ಸದಸ್ಯರುಗಳು, ಹಾಲಿ ಮಾಜಿ ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಮಂಚೂಣಿ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಮಹಿಳಾ ಅಧ್ಯಕ್ಷರು, ತಾಲ್ಲೂಕು ಮಟ್ಟದ ಅಧ್ಯಕ್ಷರು, ಪದಾಧಿಕಾರಿಗಳು, ಹಾಲಿ ಮಾಜಿ ಚುನಾಯಿತ ಸದಸ್ಯರು, ಎಲ್ಲಾ ತಾಲ್ಲೂಕು ಬ್ಲಾಕ್ ಅಧ್ಯಕ್ಷರು, ವಾರ್ಡ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪಂಚಾಯಿತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಕಾರ್ಯಕರ್ತರು, ಮುಖಂಡರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕು ಎಂಬುದಾಗಿ ಅವರು ಮನವಿ ಮಾಡಿದ್ದಾರೆ.