
ಹಿರಿಯೂರು :
ಕನ್ನಡದ ಅನೇಕ ಚಲನಚಿತ್ರಗಳಲ್ಲಿ ವಿಷ್ಣುವರ್ಧನ್, ರವಿಚಂದ್ರನ್, ಅನಂತನಾಗ್ ರವರಂತಹ ನಾಯಕ ನಟರ ಜೊತೆ ನಾಯಕನಟಿಯಾಗಿ ಅಭಿನಯಿಸುವುದರ ಜೊತೆಗೆ ದಕ್ಷಿಣಭಾರತದ ಹಲವು ಭಾಷೆಗಳಲ್ಲಿ ನಟಿಸಿ ತಮ್ಮ ಅಮೋಘ ಅಭಿನಯದ ಮೂಲಕ ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿರುವ ಬಹುಭಾಷಾ ತಾರೆ ಖುಷ್ಬುರವರಿಗೆ “ಹಿರಿಯೂರುನ್ಯೂಸ್” ತಂಡದಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.
ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ನಟಿ ಖುಷ್ಬುರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ ಆಯಸ್ಸು ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪ ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭಹಾರೈಸಿದ್ದಾರೆ.
