October 6, 2026
00004

ಹಿರಿಯೂರು :

ತಾಲೂಕಿನ ಹರಿಯಬ್ಬೆ ಹಾಗೂ ಹರಿಯಬ್ಬೆ ಪಾಳ್ಯ ಗ್ರಾಮಗಳ ಕುಡಿಯುವ ನೀರಿನ ಪ್ರಮುಖ ಆಸರೆಯಾಗಿರುವ ಅಜ್ಜಿಕಟ್ಟೆ ಚೆಕ್ ಡ್ಯಾಂಗೆ ಸನ್ಮಾನ್ಯ ಪೌರಾಡಳಿತ ಸಚಿವರಾದ ಹೆಚ್.ಸಿ.ಬಾಲಕೃಷ್ಣರವರು ಭೇಟಿ ನೀಡಿ ವೀಕ್ಷಣೆ ಮಾಡಿದರು.

ಇದೇ ಸಂದರ್ಭದಲ್ಲಿ ಚೆಕ್ ಡ್ಯಾಂನ ಪ್ರಸ್ತುತ ಸ್ಥಿತಿ ಹಾಗೂ ಕುಡಿಯುವ ನೀರಿನ ಲಭ್ಯತೆ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಸಚಿವರು ವಿವರವಾದ ಮಾಹಿತಿಯನ್ನು ಪಡೆದುಕೊಂಡರು. ಗ್ರಾಮಸ್ಥರಿಗೆ ಸಮರ್ಪಕವಾಗಿ ಕುಡಿಯುವ ನೀರು ದೊರೆಯುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಹಿರಿಯೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಸುಹಾಸ್ ಸುಧಾಕರ್, ಕಾಂಗ್ರೆಸ್ ಮುಖಂಡರಾದ ಬಿ.ಹೆಚ್.ಮಂಜುನಾಥ್,ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *