October 28, 2026
004

ಹಿರಿಯೂರು :

ತಾಲ್ಲೂಕಿನ ಜನರೊಂದಿಗೆ ನಿರಂತರ ಸಂಪರ್ಕ, ಅವರ ಸಮಸ್ಯೆಗಳಿಗೆ ಸ್ಪಂದನೆ ಹಾಗೂ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೊದಲ ಆದ್ಯತೆಯಾಗಿದೆ ಎಂಬುದಾಗಿ ಹಿರಿಯೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾದ ಸುಹಾಸ್ ಸುಧಾಕರ್ ಹೇಳಿದರು.

ತಾಲ್ಲೂಕಿನ ರಂಗನಾಥಪುರ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಸ್ಥಳೀಯ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಿ, ಮಾತನಾಡಿದರು.

ಈ ಸಂದರ್ಭದಲ್ಲಿ ಮುಖಂಡರು ಹಾಗೂ ಕಾರ್ಯಕರ್ತರ ಮನೆಗಳಿಗೆ ಭೇಟಿ ನೀಡಿ, ಗ್ರಾಮಸ್ಥರೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿದೆ. ಸಾರ್ವಜನಿಕರ ಸಮಸ್ಯೆಗಳು, ಸ್ಥಳೀಯ ಅಭಿವೃದ್ಧಿ ಕಾರ್ಯಗಳು ಹಾಗೂ ಮೂಲಭೂತ ಸೌಕರ್ಯಗಳ ಅಗತ್ಯತೆಗಳ ಕುರಿತು ಮಾಹಿತಿ ಪಡೆದರು.

About The Author

Leave a Reply

Your email address will not be published. Required fields are marked *