October 28, 2026
0004

ಹಿರಿಯೂರು :

ನಗರದ ರೆಡ್ ಕ್ರಾಸ್ ಹಾಗೂ ರೋಟರಿ ಶಿಕ್ಷಣ ಸಂಸ್ಥೆ ವತಿಯಿಂದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ವಾರದ 6 ದಿನಗಳು ಉಚಿತ ಆಹಾರ ವಿತರಣೆಯನ್ನು ಮಾಡಲಾಗುತ್ತಿದ್ದು, ಗ್ರಾಮೀಣ ಪ್ರದೇಶದಿಂದ ಬರುವ ಹಲವಾರು ರೋಗಿಗಳಿಗೆ ಮತ್ತು ಅವರ ಕುಟುಂಬಸ್ಥರಿಗೆ ಇದರಿಂದ ಅನುಕೂಲವಾಗುತ್ತದೆ ಎಂಬುದಾಗಿ ರೆಡ್ ಕ್ರಾಸ್ ಸಂಸ್ಥೆಯ ಎ.ರಾಘವೇಂದ್ರ ಹೇಳಿದರು.

ನಗರದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ರೆಡ್ ಕ್ರಾಸ್ ಹಾಗೂ ರೋಟರಿ ಸಂಸ್ಥೆ ವತಿಯಿಂದ ಆಸ್ಪತ್ರೆಗೆ ಬರುವ ರೋಗಿಗಳಿಗೆ ಉಚಿತ ಆಹಾರ ವಿತರಣೆ ಮಾಡಿ, ನಂತರ ಅವರು ಮಾತನಾಡಿದರು.ಈ ಸಂದರ್ಭದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಎ.ರಾಘವೇಂದ್ರ ಹಾಗೂ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *