
ಹಿರಿಯೂರು :
ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುವ ಮೂಲಕ ಅತ್ಯಂತ ದಕ್ಷ ಅಧಿಕಾರಿ ಎಂದೇ ತಾಲ್ಲೂಕಿನಲ್ಲಿ ಪ್ರಸಿದ್ದಿ ಪಡೆದಿದ್ದ ಗ್ರಾಮಾಂತರ ಠಾಣೆ ಪಿ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸಿದ್ದ ಜನಪ್ರಿಯ ಪೊಲೀಸ್ ಅಧಿಕಾರಿ ಡಿ.ಜಿ.ಪರಮೇಶ್ ರವರಿಗೆ “ಹಿರಿಯೂರುನ್ಯೂಸ್” ತಂಡದಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.
ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ನಮ್ಮ ಅತ್ಯಂತ ಆತ್ಮೀಯರಾದ ಪಿ.ಎಸ್.ಐ ಡಿ.ಜಿ.ಪರಮೇಶ್ ರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ ಆಯಸ್ಸು ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭಹಾರೈಸಿದ್ದಾರೆ.
