October 26, 2026
0004

ಹಿರಿಯೂರು :

ತಾಲ್ಲೂಕಿನ ಹಾರಿಕಣಿವೆ ಗ್ರಾಮದ ಶ್ರೀರಂಗನಾಥಸ್ವಾಮಿಯ ಕೃಪೆಯಿಂದ ತಾಲ್ಲೂಕಿನಲ್ಲಿ ಉತ್ತಮ ಮಳೆ-ಬೆಳೆಯಾಗಿ, ರೈತರು ಹಾಗೂ ಸಾರ್ವಜನಿಕರು ಸಮೃದ್ಧಿಯಿಂದ ಜೀವನ ನಡೆಸುವಂತಾಗಲಿ ಎಂಬುದಾಗಿ ಹಿರಿಯೂರು ವಿಧಾನಪರಿಷತ್ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸುಹಾಸ್ ಸುಧಾಕರ್ ಭಗವಂತನಲ್ಲಿ ಪ್ರಾರ್ಥಿಸಿದರು.

ತಾಲ್ಲೂಕಿನ ಹಾರಿಕಣಿವೆ ಗ್ರಾಮದ ಶ್ರೀರಂಗನಾಥಸ್ವಾಮಿ ದೇವಾಲಯದಲ್ಲಿ ದಸರಾ ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ಅಂಬಿನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಶ್ರೀರಂಗನಾಥಸ್ವಾಮಿಯ ದರ್ಶನ ಮಾಡಿ, ಆಶೀರ್ವಾದ ಪಡೆದು ಮಾತನಾಡಿದರು.

ಈ ಶುಭ ಸಂದರ್ಭದಲ್ಲಿ ಜಿ.ಪಂ.ಮಾಜಿ ಸದಸ್ಯರಾದ ನಾಗೇಂದ್ರನಾಯ್ಕ್, ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *