October 27, 2026
0003

ಹಿರಿಯೂರು :

ಚಳ್ಳಕೆರೆ ತಾಲೂಕಿನ ದೇವರಮರಿಕುಂಟೆ ಗ್ರಾಮದ ನಿವಾಸಿ, ಬರಡಾಗುತ್ತಿರುವ ಬಯಲುಸೀಮೆ ಮಣ್ಣಿನಲ್ಲಿ ಸಾಹಿತ್ಯ ಮತ್ತು ಜಾನಪದ ಸಂಸ್ಕೃತಿಯ ಹಸಿರನ್ನು ಉಳಿಸಲು ಶ್ರಮಿಸುತ್ತಿರುವ ಅಪರೂಪದ ಕಥೆಗಾರ ಹಾಗೂ ಸಾಹಿತ್ಯ ಪರಿಚಾರಕ, ಸಾಂಸ್ಕೃತಿಕ ಸಂಘಟಕ ಬಿ.ತಿಪ್ಪಣ್ಣಮರಿಕುಂಟೆ ಅವರಿಗೆ ಕರ್ನಾಟಕ ಸರ್ಕಾರ ಕೊಡ ಮಾಡುವ 2026 ನೇ ಸಾಲಿನ ವಾಲ್ಮೀಕಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶ್ರೀಯುತ ಬಿ.ತಿಪ್ಪಣ್ಣಮರಿಕುಂಟೆ ರವರಿಗೆ “ಹಿರಿಯೂರುನ್ಯೂಸ್“ತಂಡದ ವತಿಯಿಂದ ಅಭಿನಂದನೆಗಳನ್ನು ತಿಳಿಸಲಾಗಿದೆ.

ಈ 2026 ನೇ ಸಾಲಿನ ವಾಲ್ಮೀಕಿ ಪ್ರಶಸ್ತಿಗೆ ಭಾಜನರಾಗಿರುವ ಶ್ರೀಯುತ ಬಿ.ತಿಪ್ಪಣ್ಣಮರಿಕುಂಟೆರವರು ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಪ್ರಶಸ್ತಿ, ಪುರಸ್ಕಾರಗಳನ್ನು ಪಡೆಯುವಂತಾಗಲಿ  ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭಹಾರೈಸಿದ್ದಾರೆ.

About The Author

Leave a Reply

Your email address will not be published. Required fields are marked *