
ಹಿರಿಯೂರು :
ಆಗ್ನೇಯ ಪದವೀಧರರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ಎನ್.ಡಿ.ಎ ಅಭ್ಯರ್ಥಿ ಕೆ.ಎಂ.ಸುರೇಶ್ ಅವರು ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ. ಶ್ರೀಯುತ ಕೆ.ಎಂ.ಸುರೇಶ್ ರವರಿಗೆ “ಹಿರಿಯೂರುನ್ಯೂಸ್” ತಂಡದಿಂದ ಅಭಿನಂದನೆಗಳನ್ನು ತಿಳಿಸಲಾಗಿದೆ.
ಶ್ರೀಯುತ ಕೆ.ಎಂ.ಸುರೇಶ್ ರವರು ವಿಧಾನ ಪರಿಷತ್ತಿನ ಸದಸ್ಯರಾಗಿ ಜನಪರ ಕಾರ್ಯಗಳನ್ನು ಮಾಡುವ ಮೂಲಕ ಜನಮೆಚ್ಚುಗೆ ಗಳಿಸಲಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭಹಾರೈಸಿದ್ದಾರೆ
