October 31, 2026
003

ಹಿರಿಯೂರು :

ನಗರದ ಗಾಂಧಿ ಸರ್ಕಲ್ ನಲ್ಲಿ ಆಗ್ನೇಯ ಪದವೀಧರ ಕ್ಷೇತ್ರದಿಂದ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ವಿಧಾನಪರಿಷತ್ ನೂತನ ಶಾಸಕರಾದ ಕೆ.ಎಂ.ಸುರೇಶ್ ರವರು ಮೊದಲಬಾರಿಗೆ ಹಿರಿಯೂರು ವಿಧಾನಸಭಾ ಕ್ಷೇತ್ರಕ್ಕೆ  ಆಗಮಿಸಿದ್ದ ಹಿನ್ನೆಲೆಯಲ್ಲಿ ಜೆಡಿಎಸ್ ಮುಖಂಡರಾದ ಎಂ.ರವೀಂದ್ರಪ್ಪನವರು ಅದ್ದೂರಿಯಾಗಿ ಸ್ವಾಗತ ಮಾಡಿಕೊಂಡು ನೂತನ ಶಾಸಕರಿಗೆ ಗೌರವ ಪೂರ್ವಕವಾಗಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ  ಜಿಲ್ಲಾಧ್ಯಕ್ಷರಾದ ಕೆ.ಮಂಜುನಾಥ್, ಮಾಜಿ ಜಿಲ್ಲಾಧ್ಯಕ್ಷರಾದ ಎಂ.ಜಯಣ್ಣ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶಿವಶಂಕರ್, ತಾಲ್ಲೂಕು ಅಧ್ಯಕ್ಷರಾದ ಕೆ.ಶಂಕರಮೂರ್ತಿ, ಕಾರ್ಯಧ್ಯಕ್ಷರಾದ ಜಲದಪ್ಪ, ಬಿಜೆಪಿ ಮಾಜಿ ತಾಲ್ಲೂಕು ಅಧ್ಯಕ್ಷರಾದ ವಿಶ್ವನಾಥ್, ಹಾಲಿ ಅಧ್ಯಕ್ಷರಾದ ಅಭಿನಂದನ್, ಜಿಲ್ಲಾ ಎಸ್.ಟಿ.ಮೋರ್ಚಾ ಅಧ್ಯಕ್ಷರಾದ ಜೆ.ಬಿ.ರಾಜಣ್ಣ, ಯುವಅಧ್ಯಕ್ಷರಾದ ಕೆ.ಟಿ.ಹನುಮಂತರಾಯ, ಪ್ರಧಾನ ಕಾರ್ಯದರ್ಶಿಗಳಾದ ನಿತಿನ್, ಓ ಬಿ ಸಿ ಮೋರ್ಚಾ ಅಧ್ಯಕ್ಷರಾದ ಮುರುಳಿ, ಹಾಗೂ ಎರಡು ಪಕ್ಷದ ಮುಖಂಡರುಗಳು ಕಾರ್ಯಕರ್ತರುಗಳು ಭಾಗವಹಿಸಿದ್ದರು.

About The Author

Leave a Reply

Your email address will not be published. Required fields are marked *