October 31, 2026
004

ಹಿರಿಯೂರು :

ಹಿರಿಯೂರಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಶ್ರೀಯುತ ತಿಪ್ಪೇಸ್ವಾಮಿಯವರನ್ನು ರೋಟರಿ ಹಾಗೂ ರೆಡ್ ಕ್ರಾಸ್ ಸಂಸ್ಥೆ, ಸ್ಕೌಟ್ ಅಂಡ್ ಗೈಡ್ಸ್ ಪರವಾಗಿ ಹಾರ ಹಾಕಿ, ಶಾಲು ಹೊದಿಸಿ, ಸ್ವಾಗತಿಸಲಾಯಿತು.

ಇದೇ ಸಂದರ್ಭದಲ್ಲಿ ಸ್ಕೌಟ್ ಅಂಡ್ ಗೈಡ್ಸ್ ವತಿಯಿಂದ ಶಿಕ್ಷಕರಿಗೆ ಹಮ್ಮಿಕೊಳ್ಳಲಾಗಿದ್ದ ಮೂಲ ತರಬೇತಿ ಶಿಬಿರಕ್ಕೆ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಯುತ ತಿಪ್ಪೇಸ್ವಾಮಿಯವರಿಗೆ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಸ್ಕೌಟ್ ಅಂಡ್ ಗೈಡ್ಸ್ ಹಾಗೂ ರೆಡ್ ಕ್ರಾಸ್ ಛೇರ್ಮನ್ ಹೆಚ್.ಎಸ್.ಸುಂದರ್ ರಾಜ್, ಮಾಜಿ ರೋಟರಿ ಅಧ್ಯಕ್ಷರಾದ ಕಿರಣ್ ಕುಮಾರ್, ಸ್ಕೌಟ್ ಅಂಡ್ ಗೈಡ್ಸ್ ಕಾರ್ಯದರ್ಶಿ ಕೋಟಿಲಿಂಗ, ಸ್ಕೌಟ್ ಅಂಡ್ ಗೈಡ್ಸ್ ಜಿಲ್ಲಾ ಆಯುಕ್ತರಾದ ದೇವರಾಜ್, ಸೇರಿದಂತೆ ಇತರರು ಉಪಸ್ಥಿತರಿದ್ದರು. 

About The Author

Leave a Reply

Your email address will not be published. Required fields are marked *