
ಹಿರಿಯೂರು :
ಬೆಳಗಾವಿಯಲ್ಲಿ ನಡೆಯಲಿರುವ ಈ ರಾಜ್ಯಮಟ್ಟದ ಪತ್ರಿಕಾ ವಿತರಕರ ಸಮ್ಮೇಳನದಲ್ಲಿ ಹಿರಿಯೂರು ತಾಲೂಕಿನ ಎಲ್ಲಾ ಪತ್ರಿಕಾ ವಿತರಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂಬುದಾಗಿ ಹಿರಿಯೂರು ತಾಲೂಕು ಪತ್ರಿಕಾ ವಿತರಕರ ಸಂಘದ ಅಧ್ಯಕ್ಷರಾದ ಎನ್.ನಾಗಣ್ಣ ಮನವಿ ಮಾಡಿದ್ದಾರೆ.
ಬೆಳಗಾವಿಯಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಆರನೇ ವರ್ಷದ ರಾಜ್ಯ ಸಮ್ಮೇಳನದ ಲೋಗೋವನ್ನು ಬಿಡುಗಡೆ ಮಾಡಿ, ನಂತರ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ತಾಲೂಕು ವಿತರಕರ ಸಂಘದ ಗೌರವ ಅಧ್ಯಕ್ಷರಾದ ನಟರಾಜ್, ಖಜಾಂಚಿ ಪಿ.ತಿಪ್ಪೇಸ್ವಾಮಿ, ಕಾರ್ಯದರ್ಶಿ ಉಮೇಶ್ ಬಬ್ಬೂರ್, ಹಾಗೂ ಏಕಾಂತ ಸೇರಿದಂತೆ ಹಲವರು ಉಪಸ್ಥಿತರಿದ್ದರು.
