November 5, 2026
0001

ಬೆಂಗಳೂರು :

ದಾವಣಗೆರೆಯಲ್ಲಿ ಕಳೆದ ವಾರ ನಡೆದಿದ್ದ ಸಾರ್ವಜನಿಕ ಕಾರ್ಯಕ್ರಮ ಒಂದರಲ್ಲಿ ವಿಜಯೇಂದ್ರ ಅವರು ಕಾಂಗ್ರೆಸ್ ನಾಯಕರನ್ನು ಕುರಿತು ಏಕವಚನದಲ್ಲಿ ಮಾತನಾಡಿದ್ದರು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಈ ಕುರಿತು ದಾವಣಗೆರೆಯಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಂದರ್ಭದಲ್ಲಿ ಆಕ್ರೋಶಭರಿತವಾಗಿ ಕೆಲವು ಪದಗಳನ್ನು ಬಳಸಿದ್ದೇನೆ, ನನ್ನ ಪದ ಬಳಕೆಯಿಂದ ಯಾರಿಗಾದರೂ ನೋವಾಗಿದ್ದರೆ ಖಂಡಿತವಾಗಿಯೂ ಕ್ಷಮೆಯಾಚಿಸುತ್ತೇನೆ, ಉದ್ದೇಶಪೂರ್ವಕವಾಗಿ ಯಾರನ್ನೂ ನೋಯಿಸುವ ಉದ್ದೇಶ ನನಗಿರಲಿಲ್ಲ ಎಂಬುದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯದಾದ್ಯಂತ ನಿರುದ್ಯೋಗಿ ಯುವಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ,ಕೆ.ಪಿ.ಎಸ್.ಸಿ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿರುವ ಅಕ್ರಮಗಳ ಆರೋಪಗಳ ಬಗ್ಗೆ ಸರ್ಕಾರ ಗಂಭೀರವಾಗಿ ಗಮನಹರಿಸುತ್ತಿಲ್ಲ, ಮೀಸಲಾತಿ ವಿಚಾರದಲ್ಲಿ ರಾಜ್ಯ ಹೈಕೋರ್ಟ್ ಮುಂದೆ ಸಮರ್ಥವಾಗಿ ವಾದಮಂಡಿಸುವಲ್ಲಿಯೂ ಸರ್ಕಾರ ವಿಫಲವಾಗಿದೆ ಎಂಬುದಾಗಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಸುಮಾರು ಎರಡೂವರೆ ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದರೂ ಅವುಗಳನ್ನು ಭರ್ತಿ ಮಾಡುವ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಕಿಂಚಿತ್ತೂ ಕಾಳಜಿಯಿಲ್ಲ, ಯುವಕರು ವರ್ಷಗಟ್ಟಲೆ ಪರೀಕ್ಷೆ ಸಿದ್ಧತೆ ನಡೆಸಿ, ತಪಸ್ಸಿನಂತೆ  ನೇಮಕಾತಿಗಾಗಿ ಕಾಯುತ್ತಿದ್ದಾರೆ. ಆದರೆ ಸರ್ಕಾರದ ನಿರ್ಲಕ್ಷ್ಯದಿಂದ ಅವರ ಭವಿಷ್ಯ ಅತಂತ್ರವಾಗಿದೆ, ಯುವಕರು ಬೀದಿಗಳಿದು ಹೋರಾಟ ನಡೆಸುವಂತಹ ಪರಿಸ್ಥಿತಿಯನ್ನು ಕಾಂಗ್ರೆಸ್ ಸರ್ಕಾರವೇ ಸೃಷ್ಟಿಸಿದೆ ಎಂಬುದಾಗಿ ಅವರು ಆರೋಪಿಸಿದ್ದಾರೆ.

About The Author

Leave a Reply

Your email address will not be published. Required fields are marked *