
ಹಿರಿಯೂರು :
ಹಿರಿಯೂರು ಮತಕ್ಷೇತ್ರದ ಉಪಚುನಾವಣೆಗೆ ಯಾರನ್ನು ಅಭ್ಯರ್ಥಿಯಾಗಿಸಬೇಕು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ನಾಲ್ಕು ಸರ್ವೇ ಮಾಡಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಧರ್ಮಪುರ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಮಂಗಳವಾರದಂದು ಶಂಕುಸ್ಥಾಪನೆಯನ್ನು ನೆರವೇರಿಸಿದ ನಂತರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.
ನಾನು ಈಗ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷನಲ್ಲ, ಆದರೂ ಈ ಕ್ಷೇತ್ರಕ್ಕೆ ಯಾರನ್ನು ಕಣಕ್ಕೆ ಇಳಿಸಬೇಕೆಂದು ನಾಲ್ಕು ಸರ್ವೇ ಮಾಡಿಸಿದ್ದೇನೆ, ಸದ್ಯಕ್ಕೆ ಡಿ.ಕೆ.ಶಿವಕುಮಾರ್ ನಿಮ್ಮ ಅಭ್ಯರ್ಥಿಯೆಂದು ಭಾವಿಸಿ,ಎಂದರು.
ನಾನು ಚುನಾವಣೆ ಸಮಯದಲ್ಲಿ ಮಾತ್ರ ಬಂದು ಹೋಗುವವನಲ್ಲ, ನಿಮ್ಮ ಸೇವೆಗೆ ಸಂಕಲ್ಪ ಮಾಡಿದ್ದೇನೆ, ಕೊಟ್ಟು ಮಾತು ಉಳಿಸಿಕೊಳ್ಳುತ್ತೇನೆ. ಧರ್ಮಪುರದ ಜನ ಧರ್ಮವನ್ನು ಕಾಪಾಡುವವರು, ಹಾಗಾಗಿ ಧರ್ಮದಿಂದ ಮತಹಾಕಿ, ನಿಮ್ಮ ಸೇವೆ ಮಾಡುವ ಪಕ್ಷವನ್ನು ಗೆಲ್ಲಿಸಬೇಕು ಎಂಬುದಾಗಿ ಮನವಿ ಮಾಡಿದರು.
ಕ್ಷೇತ್ರದ ಮತದಾರರು ರಾಜ್ಯ ಹಾಗೂ ದೇಶದ ಅಭಿವೃದ್ಧಿ ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ, ಎಂದರಿತು ಪಕ್ಷವನ್ನು ಬೆಂಬಲಿಸಬೇಕು ಎಂಬುದಾಗಿ ಸಾರ್ವಜನಿಕರಲ್ಲಿ ಮನವಿ ಮಾಡಿದರು.
