
ಹಿರಿಯೂರು :
ನಗರದ ಖ್ಯಾತ ಉದ್ಯಮಿಗಳು, ಕರ್ನಾಟಕ ರಾಜ್ಯ ಆರ್ಯವೈಶ್ಯ ಮಂಡಳಿ ಶಿಕ್ಷಣ ಸಂಸ್ಥೆಗಳ ರಾಜ್ಯ ಒಕ್ಕೂಟದ ಅಧ್ಯಕ್ಷರು, ಚಿತ್ರದುರ್ಗ ಆರ್ಯವೈಶ್ಯ ಮಹಾಸಭಾದ ಜಿಲ್ಲಾ ಅಧ್ಯಕ್ಷರು ಹಾಗೂ ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಶ್ರೀ ವಾಗ್ದೇವಿ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಕೆ.ವಿ.ಅಮರೇಶ್ ರವರಿಗೆ “ಹಿರಿಯೂರುನ್ಯೂಸ್” ತಂಡದ ವತಿಯಿಂದ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಲಾಗಿದೆ.
ಶ್ರೀಯುತ ಕೆ.ವಿ.ಅಮರೇಶ್ ರವರು ನಗರದಲ್ಲಿ ಅನೇಕ ಉದ್ಯಮಗಳನ್ನು ಸ್ಥಾಪಿಸಿ, ಅನೇಕ ಜನರಿಗೆ ಉದ್ಯೋಗ ನೀಡುವ ಮೂಲಕ ಸಮಾಜಮುಖಿಗಳಾಗಿ ಹಾಗೂ ಜನಾನುರಾಗಿಗಳಾಗಿ ಸೇವೆ ಸಲ್ಲಿಸುತ್ತಿದ್ದು. ಈ ಮೂಲಕ ಸಮಾಜದ ಬಡವರಿಗೆ, ಹಿಂದುಳಿದರವರಿಗೆ, ಸಹಾಯಹಸ್ತ ನೀಡುತ್ತಿದ್ದಾರೆ. ಇವರ ಜೀವನದಲ್ಲಿ ಇನ್ನೂ ಹೆಚ್ಚುಹೆಚ್ಚು ಯಶಸ್ಸುನ್ನು ಕಾಣುವ ಮೂಲಕ ಅವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂಬುದಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪ ಅವರು ಹುಟ್ಟುಹಬ್ಬದ ಸಂದರ್ಭದಲ್ಲಿ ಶುಭಹಾರೈಸಿದ್ದಾರೆ.
ಈ ಹುಟ್ಟುಹಬ್ಬದ ಶುಭ ಸಂದರ್ಭದಲ್ಲಿ ನಮ್ಮ ಅತ್ಯಂತ ಆತ್ಮೀಯರಾದ ಕೆ.ವಿ.ಅಮರೇಶ್ ರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತನು ಆರೋಗ್ಯ, ಆಯಸ್ಸು, ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ, ಶಾಂತಿ, ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ ಇವರುಗಳು ಶುಭಹಾರೈಸಿದ್ದಾರೆ.
