
ಹಿರಿಯೂರು :
ರಾಜ್ಯ ಸರ್ಕಾರ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಕೆಲಸಮಾಡುವ ಮಹಿಳೆಯರಿಗೆ ತಿಂಗಳಿಗೆ ಒಂದರಂತೆ ವರ್ಷಕ್ಕೆ 12 ದಿನ ಋತು ಚಕ್ರದ ವೇತನ ಸಹಿತ ರಜೆಯನ್ನು ಮಂಜೂರು ಮಾಡಲು ಅನುಮತಿ ನೀಡಿರುವುದು ನಿಜಕ್ಕೂ ಸಂತಸದ ವಿಚಾರವಾಗಿದೆ ಎಂಬುದಾಗಿ ಮನವಿಟ್ರಸ್ಟ್ ಅಧ್ಯಕ್ಷರಾದ ಶ್ರೀಮತಿ ಮಾನಸಮಂಜುನಾಥ್ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಋತುಚಕ್ರದ ರಜೆಯು ಈಗಾಗಲೇ ಬೇರೆ ರಾಜ್ಯಗಳಲ್ಲಿ ಮಂಜೂರಾಗಿದ್ದು, ಇದೀಗ ನಮ್ಮ ರಾಜ್ಯದಲ್ಲಿಯೂ ಜಾರಿಯಾಗುತ್ತಿರುವುದು ಸಂತೋಷದ ವಿಷಯವಾಗಿದ್ದು, ಈ ಸಂದರ್ಭದಲ್ಲಿ ಹೆಣ್ಣು ಮಕ್ಕಳಿಗೆ ಆಗುವ ದೈಹಿಕ ಹಾಗೂ ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ವಿಶ್ರಾಂತಿ ಅಗತ್ಯವಾಗಿದೆ, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರ ಮಹಿಳೆಯರಿಗೆ ಅನುಕೂಲವಾಗಲಿದೆ.
ಇದೇ ರೀತಿ ಮುಂದಿನ ದಿನಗಳಲ್ಲಿಯೂ ಸಹ ಸರ್ಕಾರ ಶಾಲಾ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೂ ಸಹ ನೀಡಬೇಕು ಎಂಬುದಾಗಿ ಮನವಿಟ್ರಸ್ಟ್ ಅಧ್ಯಕ್ಷರಾದ ಶ್ರೀಮತಿ ಮಾನಸಮಂಜುನಾಥ್ ವಿದ್ಯಾರ್ಥಿನಿಯರ ಪರವಾಗಿ ಮನವಿ ಮಾಡಿದ್ದಾರೆ.

