March 2, 2026
0004

ಹಿರಿಯೂರು:

ನಗರದ ಅಸಂಷನ್ ಶಾಲೆ ವಿದ್ಯಾರ್ಥಿಗಳು  ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಚಿತ್ರದುರ್ಗದಲ್ಲಿ  ಹಮ್ಮಿಕೊಳ್ಳಲಾಗಿದ್ದ 14ವರ್ಷ ವಯೋಮಿತಿಯ ಜಿಲ್ಲಾ ಮಟ್ಟದ  ವಾಲಿಬಾಲ್ ಸ್ಪರ್ಧೆಯಲ್ಲಿ  ಭಾಗವಹಿಸಿ ಪ್ರಥಮಸ್ಥಾನ ಗಳಿಸಿ  ಬೆಂಗಳೂರು ವಿಭಾಗ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ ಎಂಬುದಾಗಿ ಜಿಲ್ಲಾದೈಹಿಕ ಶಿಕ್ಷಣ ಅಧಿಕಾರಿ ಚಿದಾನಂದ್ ತಿಳಿಸಿದ್ದಾರೆ.

ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಚಿದಾನಂದ ಅವರು ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಾಲಿಬಾಲ್ ತರಬೇತುದಾರ ಫಯಾಜ್, ಅಸಂಶನ್ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಆಲ್ಫನ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *