March 2, 2026
00001

ಹಿರಿಯೂರು:  

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಸ||ಬನೋಶಿ ಗ್ರಾಮದ ದಲಿತ ಬಾಲಕಿ ಬಸಮ್ಮ ಮಾನಪ್ಪ ಚಲವಾದಿಯನ್ನು ನಿರಂತರವಾಗಿ 12ಗಂಟೆಗಳ ಕಾಲ ಸಾಮೂಹಿಕವಾಗಿ ಅತ್ಯಾಚಾರ ಮಾಡಿ, ಕೊಲೆಗೈದಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ, ಇವರುಗಳನ್ನು ಗಲ್ಲು ಶಿಕ್ಷೆಗೆ ಗುರಿ ಪಡಿಸಬೇಕು ಎಂಬುದಾಗಿ ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ಸಮಿತಿ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ.ರಾಮಚಂದ್ರ ಒತ್ತಾಯಿಸಿದ್ದಾರೆ.

ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ಸಮಿತಿ ತಾಲ್ಲೂಕು ಘಟಕದ ವತಿಯಿಂದ ಗುರುವಾರದಂದು ದಲಿತ ಹೆಣ್ಣು ಮಕ್ಕಳ ಮೇಲೆ ನಿರಂತರವಾಗಿ ಅತ್ಯಾಚಾರ ಮತ್ತು ದೌರ್ಜನ್ಯ ನಡೆಯುತ್ತಿರುವುದನ್ನು ಖಂಡಿಸಿ  ತಾಲ್ಲೂಕು ತಹಶೀಲ್ದಾರ್   ಇವರ ಮುಖಾಂತರ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿಪತ್ರ ಸಲ್ಲಿಸಿ, ನಂತರ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ.ರಾಮಚಂದ್ರ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಆರ್.ರಾಘವೇಂದ್ರ, ಜಿಲ್ಲಾಧ್ಯಕ್ಷರಾದ ಆರ್.ಶಿವರಾಜಕುಮಾರ್, ಜಿಲ್ಲಾ ಉಪಾಧ್ಯಕ್ಷರುಗಳಾದ ಲಕ್ಷ್ಮಣ್ ರಾವ್, ಕೆಂಚಪ್ಪ ಆಟೋ, ಹಿರಿಯೂರು ತಾಲ್ಲೂಕು ಅಧ್ಯಕ್ಷರಾದ  ಓಂಕಾರ್ ಮೂರ್ತಿ (ದೊಡ್ಡಘಟ್ಟ), ತಾಲ್ಲೂಕು ಕಾರ್ಯಾಧ್ಯಕ್ಷರಾದ ರಂಗಸ್ವಾಮಿಆಟೋ, ತಾಲ್ಲೂಕು ಆಟೋ ಘಟಕದ ಅಧ್ಯಕ್ಷರಾದರಮೇಶ್, ತಾಲ್ಲೂಕು ಕಾರ್ಯದರ್ಶಿಯಾದ ಅಶೋಕ (ಹರ್ತಿಕೋಟೆ) ಹಾಗೂ ದಲಿತ ಮುಖಂಡರುಗಳಾದ ರಾಜಪ್ಪ, ಚಂದ್ರಣ್ಣ ಗಾಂಧಿನಗರ ಸೇರಿದಂತೆ ಅನೇಕ ಮುಖಂಡರುಗಳು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *