March 2, 2026
002


ಹಿರಿಯೂರು:

ಕರ್ನಾಟಕ ರಾಜ್ಯದ ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಪರಿಶ್ರಮ ಹಾಗುಸರ್ಕಾರದಬದ್ಧತೆಯಿಂದ ತಾಲ್ಲೂಕಿನ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಯುಗದ ಆರಂಭವಾಗಿದೆ  ಕರ್ನಾಟಕಸರ್ಕಾರ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡುವಮೂಲಕ  ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಭದ್ರಬುನಾದಿಯನ್ನು ಹಾಕಲಾಗಿದೆ ಎಂಬುದಾಗಿ ತಾಲ್ಲೂಕಿನ ಜನರು ಸಂತಸ ವ್ಯಕ್ತಪಡಿಸಿದ್ದಾರೆ.

ತಾಲ್ಲೂಕಿನ ವಿ.ವಿ.ಪುರ, ಆಲೂರು ಹಾಗೂ ಹಿರಿಯೂರು ಟೌನ್ ಪ್ರದೇಶಗಳ ಸರ್ಕಾರಿ ಶಾಲೆಗಳನ್ನು “ಕರ್ನಾಟಕ ಪಬ್ಲಿಕ್ ಶಾಲೆ (ಕೆ.ಪಿ.ಎಸ್.)”ಗಳಾಗಿ ಉನ್ನತೀಕರಿಸಲು ಅನುಮೋದನೆ ದೊರೆತಿದ್ದು, ಈ ಯೋಜನೆಯಡಿ ಪ್ರತಿ ಶಾಲೆಗೆ ಅಂದಾಜು 4ಕೋಟಿ ರೂ.ವೆಚ್ಚದಲ್ಲಿ ಮೂಲಭೂತ ಸೌಕರ್ಯಗಳು ಕಲ್ಪಿಸಲಾಗುತ್ತದೆ ಎಂಬುದಾಗಿ ಪತ್ರಿಕಾ ಮಾಧ್ಯಮಗಳಿಗೆ ಮಾಹಿತಿ ತಿಳಿದುಬಂದಿದೆ.
ಈ ಗ್ರಾಮಗಳಲ್ಲಿನ ಶಾಲಾ ಆವರಣದ ಅಗತ್ಯಕ್ಕೆ ತಕ್ಕಂತೆ ಹೊಸ ಕಟ್ಟಡ ನಿರ್ಮಿಸಲಾಗುತ್ತದೆ. ಪ್ರತಿ ಕೆ.ಪಿ.ಎಸ್. ಶಾಲೆಯಲ್ಲಿ ಮಕ್ಕಳನ್ನು ಕರೆದುಕೊಂಡು ಬರಲು ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಪ್ರತಿ 5 ಕಿಲೋಮೀಟರ್ ವ್ಯಾಪ್ತಿಯಲ್ಲಿ 1ಕೆ.ಪಿ.ಎಸ್. ಶಾಲೆ ಆರಂಭಿಸುವ ಗುರಿ ಹೊಂದಲಾಗಿದೆ. ಪ್ರತಿ ಶಾಲೆಯಲ್ಲಿ 1200 ರಿಂದ 1800 ವಿದ್ಯಾರ್ಥಿಗಳು ಶಿಕ್ಷಣ ಪಡೆಯುವ ವ್ಯವಸ್ಥೆ ಇರಲಿದೆ.

ತಾಲ್ಲೂಕಿನಲ್ಲಿ ಈ ಯೋಜನೆಯ ಮೂಲಕ ನಮ್ಮ ತಾಲ್ಲೂಕಿನ ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಹೊಸ ದಾರಿ ತೆರೆಯಲಿದ್ದು, ಕ್ಷೇತ್ರದ ಸಚಿವರಾದ ಡಿ.ಸುಧಾಕರ್ ರವರ ಪರಿಶ್ರಮ ಮತ್ತು ರಾಜ್ಯ ಸರ್ಕಾರದ ಬದ್ಧತೆಯ ಫಲವಾಗಿ ತಾಲ್ಲೂಕಿನಲ್ಲಿ ಶಿಕ್ಷಣಕ್ಕೆ ಮೊದಲ ಆದ್ಯತೆಯನ್ನು ನೀಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರತೆ ನೀಡಲಾಗುತ್ತಿರುವುದು ಸಾರ್ವಜನಿಕರಲ್ಲಿ ಸಂತಸದ ವಿಚಾರವಾಗಿದೆ.

About The Author

Leave a Reply

Your email address will not be published. Required fields are marked *