
ಹಿರಿಯೂರು:
ತಾಲ್ಲೂಕಿನ ಆದಿವಾಲ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಸರ್ವಿಸ್ ರೋಡ್ ನಲ್ಲಿ ಸುಮಾರು 5 ರಿಂದ 6 ಅಡಿ ಆಳದ ಭಾರಿ ಗುಂಡಿ ಬಿದ್ದಿದೆ. ಈ ಮಾರ್ಗದಲ್ಲಿ ಪ್ರತಿದಿನ ಶಾಲಾ ಮಕ್ಕಳು ಸಂಚಾರ ಮಾಡುತ್ತಿದ್ದು, ಸ್ವಲ್ಪ ಎಚ್ಚರಿಕೆ ತಪ್ಪಿದರೆ ಪ್ರಾಣಾಪಾಯ ಸಂಭವಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬುದಾಗಿ ಸ್ಥಳೀಯರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ಬಗ್ಗೆ ಹಲವಾರು ಬಾರಿ ಗ್ರಾಮಸ್ಥರು ಸಂಬಂಧಪಟ್ಟ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ, ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಗ್ರಾಮಸ್ಥರು ಸ್ಥಳೀಯ ಆಡಳಿತ ಹಾಗೂ ಗ್ರಾಮ ಪಂಚಾಯಿತಿಯು ತಕ್ಷಣ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಈ ಅಪಾಯಕಾರಿ ಗುಂಡಿಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂಬುದಾಗಿ ಸಾರ್ವಜನಿಕರು ಆಗ್ರಹಿಸಿದ್ದಾರೆ.

