
ಹಿರಿಯೂರು:
ನಗರದ ನಗರ ವ್ಯಾಪ್ತಿಯಲ್ಲಿ ಪ್ರತಿ ಶನಿವಾರ ಸ್ವಚ್ಛತಾ ಇ ಸೇವಾ ಕಾರ್ಯಕ್ರಮದಡಿ “ನಮ್ಮಚಿತ್ತಸ್ವಚ್ಛತೆಯತ್ತ”ಎಂಬುವಂತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ನಗರದ ಸ್ವಚ್ಛತೆ ಕಾಪಾಡುವಲ್ಲಿ ನಗರಸಭೆಯೊಂದಿಗೆ ಕೈಜೋಡಿಸಬೇಕು ಎಂಬುದಾಗಿ ನಗರಸಭೆ ಅಧ್ಯಕ್ಷರಾದ ಬಾಲಕೃಷ್ಣ ಹೇಳಿದರು.
ನಗರದ ವಾರ್ಡ್ ನಂ 29ರ ನಂಜಯ್ಯನಕೊಟ್ಟಿಗೆಯ ರುದ್ರಭೂಮಿಯಲ್ಲಿ ಹಮ್ಮಿಕೊಳ್ಳಲಾಗಿದ್ದ “ನಮ್ಮಚಿತ್ತಸ್ವಚ್ಛತೆಯತ್ತ “ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷರಾದ ಬಾಲಕೃಷ್ಣ, ಉಪಾಧ್ಯಕ್ಷರಾದ ಶ್ರೀಮತಿ ಮಂಜುಳಾ, ಸ್ಥಾಯಿಸಮಿತಿ ಅಧ್ಯಕ್ಷರು ಹಾಗೂ ಗೌರವಾನ್ವಿತ ಸದಸ್ಯರುಗಳು ಹಾಗೂ ಪೌರಾಯುಕ್ತರಾದ ಎ.ವಾಸೀಂ, ಹಿರಿಯ ಮತ್ತು ಕಿರಿಯ ಆರೋಗ್ಯ ನಿರೀಕ್ಷಕರುಗಳು ಮತ್ತು ದಫೇದಾರಗಳು ಹಾಗೂ ಪೌರಕಾರ್ಮಿಕರು ಮತ್ತು 28ನೇ ವಾರ್ಡ್ನ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ಈ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

