
ಹಿರಿಯೂರು:
ಕೆಲಸದ ಸ್ಥಳದಲ್ಲಿ ಕಾರ್ಮಿಕರ ಆರೋಗ್ಯ ಹಾಗೂ ಸುರಕ್ಷತೆ ಕಾಪಾಡುವ ಉದ್ದೇಶದಿಂದ, ಟ್ರೇಡ್ ವೈಸ್ ಸೇಫ್ಟಿ ಕಿಟ್ ಗಳ ವಿತರಣೆ ಮಾಡಲಾಗುತ್ತಿದ್ದು, ಸರ್ಕಾರ ಕೈಗೊಂಡಿರುವ ಈ ಕಲ್ಯಾಣ ಕಾರ್ಯಕ್ರಮವನ್ನು ಎಲ್ಲರಿಗೂ ತಲುಪಿಸುವ ಪ್ರಯತ್ನ ಮಾಡಲಾಗಿದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 2025–26ನೇ ಸಾಲಿನಲ್ಲಿ ಸ್ವೀಕೃತವಾದ ಟ್ರೇಡ್ ವೈಸ್ ಸೇಫ್ಟಿ ಕಿಟ್ ಗಳ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ನಂತರ ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ ಕಾರ್ಮಿಕರುಗಳಿಗೆ ಸೇಫ್ಟಿ ಕಿಟ್ ಗಳನ್ನು ಹಸ್ತಾಂತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆ ಅಧಿಕಾರಿಗಳು ಮತ್ತು ಸ್ಥಳೀಯ ನಾಯಕರು, ಕಟ್ಟಡ ಕಾರ್ಮಿಕರು ಉಪಸ್ಥಿತರಿದ್ದರು.

