
ಹಿರಿಯೂರು:
ನಗರದ ವಾರ್ಡ್ ನಂ:08, 09ಮತ್ತು16ರ ವೇದಾವತಿ ನದಿ ತಗ್ಗು ಪ್ರದೇಶದಲ್ಲಿ ವಾಸವಾಗಿರುವ ನಿವಾಸಿಗಳಿಗೆ ಹಿರಿಯೂರಿನಾದ್ಯಂತ ಹೆಚ್ಚು ಮಳೆಯಾಗುತ್ತಿರುವ ಕಾರಣ ವೇದಾವತಿ ನದಿಯ ನೀರಿನ ಪಾತ್ರವು ಹೆಚ್ಚಾಗಿದ್ದು, ಮುಂಜಾಗ್ರತ ಕ್ರಮವಾಗಿ ತಮ್ಮ ಕುಟುಂಬ ಸದಸ್ಯರೊಂದಿಗೆ ಗುರುಭವನದಲ್ಲಿ ಸದ್ಯದ ಮಟ್ಟಕ್ಕೆ ತಂಗುವುದಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಿದ್ದು, ಸದ್ಯದ ಮಟ್ಟಿಗೆ ಅಲ್ಲಿಗೆ ತೆರಳಬೇಕು ಎಂಬುದಾಗಿ ನಗರಸಭೆ ಅಧ್ಯಕ್ಷರಾದ ಬಾಲಕೃಷ್ಣ ಅಲ್ಲಿನ ನಿವಾಸಿಗಳಿಗೆ ನಿರ್ದೇಶನ ನೀಡಿದರು.

ನಗರದ ವಾರ್ಡ್ ನಂ:08, 09ಮತ್ತು16ರ ವೇದಾವತಿ ನದಿ ತಗ್ಗು ಪ್ರದೇಶಗಳಿಗೆ ಭೇಟಿ ನೀಡಿ, ಮಳೆಯಿಂದಾಗಿ ವಾಣಿವಿಲಾಸ ಜಲಾಶಯದಲ್ಲಿ ನೀರು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ನಿವಾಸಿಗಳಿಗೆ ಸ್ಥಳ ಬದಲಾವಣೆ ಮಾಡುವಂತೆ ಸೂಚನೆ ನೀಡಿ, ಮಾತನಾಡಿದರು.

ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತರಾದ ಎ.ವಾಸೀಂ, ನಗರಸಭೆ ಅಧ್ಯಕ್ಷರಾದ ಬಾಲಕೃಷ್ಣ, ಉಪಾಧ್ಯಕ್ಷರಾದ ಶ್ರೀಮತಿ ಮಂಜುಳ, ಸ್ಥಾಯಿ ಸಮಿತಿ ಅಧ್ಯಕ್ಷರು ಹಾಗೂ ಗೌರವಾನ್ವಿತ ಸದಸ್ಯರುಗಳು ಹಾಗೂ ಹಿರಿಯ ಮತ್ತು ಕಿರಿಯ ಆರೋಗ್ಯ ನಿರೀಕ್ಷಕರುಗಳು ಉಪಸ್ಥಿತರಿದ್ದರು.
