
ಹಿರಿಯೂರು:
ತಾಲ್ಲೂಕಿನ ವಾಣಿವಿಲಾಸ ಸಾಗರ ಜಲಾಶಯದ ಕೋಡಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದಂತಹ ವ್ಯಕ್ತಿಯನ್ನು ಮೀನುಗಾರರು ಹಾಗೂ ಸಾರ್ವಜನಿಕರ ಸಹಕಾರದಿಂದ ಅಲ್ಲೇ ಇದ್ದ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ರಕ್ಷಣೆ ಮಾಡಿದ್ದು, ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯನ್ನು ಕಾಪಾಡಿ, ಪ್ರಾಣ ಉಳಿಸಿದಂತಹ ಪೋಲಿಸ್ ಇಲಾಖೆಯ ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ಸೂಚಿಸಿದ್ದಾರೆ.

ಸಾರ್ವಜನಿಕರು ವಾಣಿವಿಲಾಸ ಸಾಗರ ಜಲಾಶಯದ ಕೋಡಿ ಹರಿಯುವುದನ್ನು ದೂರದಿಂದ ನೋಡಿ ಸಂಭ್ರಮಿಸಬೇಕು, ಯಾವುದೇ ಕಾರಣಕ್ಕೂ ಕೋಡಿ ನೀರಿನಲ್ಲಿ ಇಳಿಯಬಾರದು, ಇದರಿಂದ ಪ್ರಾಣಾಪಾಯ ಸಂಭವಿಸುವ ಸಾಧ್ಯತೆಯಿದ್ದು, ಎಚ್ಚರಿಕೆಯಿಂದ ಇರಬೇಕು ಎಂಬುದಾಗಿ ಪೋಲೀಸ್ ಇಲಾಖೆಯ ಅಧಿಕಾರಿಗಳು ಮನವಿ ಮಾಡಿದ್ದಾರೆ.


