
ಹಿರಿಯೂರು:
ತಾಲೂಕಿನಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳ ಮೇಲೆ ದೀಪಾಲಂಕಾರ ಹಾಗೂ ಧ್ವಜಾರೋಹಣ ಕಾರ್ಯಕ್ರಮ ಕಡ್ಡಾಯವಾಗಿ ಮಾಡಬೇಕು ಎಂಬುದಾಗಿ ತಾಲ್ಲೂಕು ಅಧ್ಯಕ್ಷರಾದ ರಾಮಕೃಷ್ಣಪ್ಪ ತಹಶೀಲ್ದಾರರಿಗೆ ಒತ್ತಾಯಿಸಿದರು.
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಹಿರಿಯೂರು ತಾಲ್ಲೂಕು ಘಟಕದ ವತಿಯಿಂದ ತಾಲೂಕಿನಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳ ಮೇಲೆ ದೀಪಾಲಂಕಾರ ಹಾಗೂ ಧ್ವಜಾರೋಹಣ ಕಾರ್ಯಕ್ರಮ ಒತ್ತಾಯಿಸಿ, ತಾಲ್ಲೂಕಿನ ದಂಡಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ, ನಂತರ ಮಾತನಾಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷರಾದ ರಾಮಕೃಷ್ಣಪ್ಪ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಡಿ.ಕೆ.ಎಸ್.ದಾದಾಪೀರ್, ನಗರಾಧ್ಯಕ್ಷರಾದ ಮೊಹಮ್ಮದ್ ಜಾಕೀರ್, ಧರ್ಮಪುರಹೋಬಳಿ ಘಟಕದ ಅಧ್ಯಕ್ಷರಾದ ರಾಜಣ್ಣಗೌಡ್ರು, ನಗರ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಸುಹೇಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
