March 2, 2026
1-

ಹಿರಿಯೂರು :

ಕನ್ನಡ ರಾಜ್ಯೋತ್ಸವವು ಕರುನಾಡ ಹೆಮ್ಮೆಯ ಹಬ್ಬವಾಗಿದ್ದು, ಈ ಕನ್ನಡ ರಾಜ್ಯೋತ್ಸವದ ಆಚರಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ಬಾಲ್ಯದಲ್ಲಿಯೇ ತಿಳಿಸುವ ಉದ್ದೇಶದಿಂದ ನಮ್ಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಒಂದು ದಿನ ಪೂರ್ವಭಾವಿಯಾಗಿ ಆಚರಿಸಲಾಗುತ್ತಿದೆ ಎಂಬುದಾಗಿ ವಾಣಿವಿಲಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಆಲೂರು ಹನುಮಂತರಾಯಪ್ಪ ಹೇಳಿದರು.

ನಗರದ ವಾಣಿವಿಲಾಸ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ದೀಪಬೆಳಗುವ ಮೂಲಕ ಉದ್ಘಾಟಿಸಿ ನಂತರ ಅವರು ಮಾತನಾಡಿದರು.

ಕನ್ನಡ ಭಾಷೆಗೆ ಸುಮಾರು 2 ಸಾವಿರ ವರ್ಷಗಳ ಇತಿಹಾಸವಿದ್ದು, ಇಂತಹ ಶ್ರೀಮಂತ ಭಾಷೆಯನ್ನು ಪ್ರೀತಿಸುವ, ಆರಾಧಿಸುವ, ಬಳಕೆ ಮಾಡುವ ಮನಸ್ಸು ನಮ್ಮಲ್ಲಿರಬೇಕು, ನಮ್ಮ ಕನ್ನಡ ನಾಡು, ನುಡಿಯ ಬಗ್ಗೆ ಅಭಿಮಾನವನ್ನು ಬೆಳೆಸಿಕೊಳ್ಳಬೇಕು, ಈ ನಿಟ್ಟಿನಲ್ಲಿ ಕರುನಾಡಿನ ವಿದ್ಯಾರ್ಥಿಗಳು ಕನ್ನಡ ಕಲಿತು, ಕನ್ನಡ ಮಾತನಾಡಿ, ಕನ್ನಡಭಾಷೆಯನ್ನು ಉಳಿಸಲು ಶ್ರಮಿಸಬೇಕು ಎಂಬುದಾಗಿ ಹೇಳಿದರು.

ಈ ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕರಾದ ಶ್ರೀಮತಿ ಸೌಮ್ಯ, ವ್ಯವಸ್ಥಾಪಕಿ ಶ್ರೀಮತಿ ವಸಂತಾ, ಶಿಕ್ಷಕ ಉಮೇಶ್ ಯಾದವ್, ಶಿವರಾಜ್ ನಾಯಕ್, ಕೋ-ಆರ್ಡಿನೇಟರ್ ಗಳಾದ ಶ್ರೀಮತಿ ನಂದಿನಿ, ಶ್ರೀಮತಿ ರಚನ, ಶಿಕ್ಷಕಿಯರುಗಳಾದ ರಜಿಯಾ, ಗಂಗಮ್ಮ, ರಂಜಿತಾ, ಸಬೀಹಾ, ಮುಬೀನಾ, ಹೇಮಲತಾ, ದ್ರಾಕ್ಷಾಯಣಿ, ಸಾಧಿಕಾ, ಮಮತಾ,ಭಾಗ್ಯ, ಪೂಜಾ, ಕಾವ್ಯ, ಜಯಸುಧಾ, ಅಕ್ಷಿತಾ, ಸುಲೋಚನಾ, ಸೇರಿದಂತೆ ವಿದ್ಯಾಸಂಸ್ಥೆಯ ವಿದ್ಯಾರ್ಥಿ-ವಿದ್ಯಾರ್ಥಿನಿಯರುಗಳು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *