April 18, 2026
000004

ಹಿರಿಯೂರು:

ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಅವರಅಹವಾಲು  ಆಲಿಸಿ ಸೂಕ್ತ ಪಹಿಹಾರ ಒದಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದಲ್ಲಿ ಸೋಮವಾರ ನಡೆದ ಕೆ.ಡಿ.ಪಿ. ಸಭೆಯಲ್ಲಿ ವಿವಿಧ ಿಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ನಂತರ ಅವರು ಮಾತನಾಡಿದರು.

ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಬೇಕು. ಯಾವುದೇ ಕಾರಕ್ಕೂ ನಿರ್ಲಕ್ಷ್ಯ ಮಾಡಬಾರದು.ಪ್ರತಿಯೊಂದು ಕಾಮಗಾರಿಯೂ ನಿಗದಿತ ಅವಧಿಯಲ್ಲಿ ಗುಣಮಟ್ಟದೊಂದಿಗೆ ಪೂರ್ಣಗೊಳ್ಳಬೇಕು. ಸಾರ್ವಜನಿಕರಿಂದ ದೂರು ಬಂದರೆ ಸಹಿಸುವುದಿಲ್ಲ  ಎಂಬುದಾಗಿ ಅವರು ಎಚ್ಚರಿಕೆ ನೀಡಿದರು.

ಕೆಲವು ಅಧಿಕಾರಿಗಳು ಕರ್ತವ್ಯ ಲೋಪ ಎಸಗುತ್ತಿರುವದು ಕಂಡುಬಂದಿದೆ. ಜನಹಿತ ರಕ್ಷಣೆ ನಮ್ಮ ಮೊದಲ ಆದ್ಯತೆ. ಜನಪರ ಆಡಳಿತ ನಮ್ಮ ಸಂಕಲ್ಪ.ಅದಕ್ಕೆ ತಕ್ಕಂತೆ ಅಧಿಕಾರಿಗಳು ನಡೆದುಕೊಳ್ಳಬೇಕು ಇಲ್ಲದಿದ್ದರೆ ಸಹಿಸುವುದಿಲ್ಲ ಎಂಬುದಾಗಿ ಅವರು ಹೇಳಿದರು.

ಈ ಸಭೆಯಲ್ಲಿ ತಹಶೀಲ್ದಾರ್ ಸಿದ್ದೇಶ್, ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದಅಧಿಕಾರಿಗಳು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *