
ಹಿರಿಯೂರು:
ತಾಲ್ಲೂಕಿನ ಕಲ್ಲಹಟ್ಟಿ ಗ್ರಾಮದಲ್ಲಿ ಐಮಂಗಲ-ಹೊರಕೆದೇವಪುರ ಮುಖ್ಯ ರಸ್ತೆಯಿಂದ ಕಲ್ಲಹಟ್ಟಿ ಎನ್.ಸಿ.ಕಾಲೋನಿಯವರೆಗೆ 50 ಲಕ್ಷರೂ.ವೆಚ್ಚದ ರಸ್ತೆ ಅಭಿವೃದ್ಧಿ ಮತ್ತು ಡಾಂಬರೀಕರಣದ ಕಾಮಗಾರಿಗೆ ರಾಜ್ಯ ಯೋಜನಾ ಮತ್ತು ಸಾಂಖ್ಯಿಕ ಸಚಿವರು ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ಭೂಮಿ ಪೂಜೆಯನ್ನು ನೆರವೇರಿಸಿದರು.

ಹೊರಕೆದೇವಪುರ ಮುಖ್ಯ ರಸ್ತೆಯಿಂದ ಕಲ್ಲಹಟ್ಟಿಗೆ ಬರುವ ರಸ್ತೆ ಹಾಳಾಗಿದ್ದು, ರಸ್ತೆ ಅಭಿವೃದ‍್ದಿಪಡಿಸುವಂತೆ ಮಾಡಿದ್ದ ಮನವಿಗೆ ಸಚಿವರು ಸ್ಪಂದಿಸಿದ್ದಾರೆ. ಗ್ರಾಮಸ್ಥರ ಬೇಡಿಕೆ ಈಡೇರಿದ್ದು, ಗ್ರಾಮದ ಜನತೆಯ ಪರವಾಗಿ ಸಚಿವರಿಗೆ ಅಭಿನಂದಿಸುತ್ತೇನೆ ಎಂಬುದಾಗಿ ಗ್ರಾಮಪಂಚಾಯಿತಿ ಉಪಾಧ್ಯಕ್ಷೆಯಾದ ಶ್ರೀಮತಿ ವೀಣಾಹರೀಶ್ ಅವರು ಹೇಳಿದರು.

ಈ ಸಂದರ್ಭದಲ್ಲಿ ಕಲ್ಲಹಟ್ಟಿತಿಪ್ಪೇಸ್ವಾಮಿ, ಕಲ್ಲಹಟ್ಟಿಹರೀಶ್, ಗ್ರಾಮಪಂಚಾಯಿತಿ ಸದಸ್ಯರಾದ ನಾಗರಾಜ್, ಮಲ್ಲಿಕಾರ್ಜುನ್, ಕಣುಮಪ್ಪ, ಕೆಂಚಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಈರಲಿಂಗೇಗೌಡ, ಕಂದಿಕೆರೆಸುರೇಶ್ ಬಾಬು, ಗಿಡ್ಡೋಬನಹಳ್ಳಿ ಅಶೋಕ್, ಪಾತಲಿಂಗಪ್ಪ, ಬಾಬು, ಸಿದ್ದಾಬೋವಿ ಸೇರಿದಂತೆ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

