
ಹಿರಿಯೂರು :
ದೇಶದ ಏಕತೆ-ಸಾಮಾಜಿಕ ನ್ಯಾಯಕ್ಕೆ ಸಂವಿಧಾನವೇ ದೊಡ್ಡ ಬಲ. ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನು. ದೇಶದಲ್ಲಿ ಸಂವಿಧಾನ ಜಾರಿಗೆ ಬಂದ ನಂತರ ಹೊಸ ಶಕೆ ಆರಂಭವಾಯಿತು ಎಂಬುದಾಗಿ ತಾಲ್ಲೂಕು ತಹಶೀಲ್ದಾರ್ ರಾದ ಎಂ.ಸಿದ್ಧೇಶ್ ಅವರು ಹೇಳಿದರು.
ನಗರದ ತಾಲ್ಲೂಕು ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇಂದಿನ ಯುವಜನರಲ್ಲಿ ಸಂವಿಧಾನ ಆಶಯ,ಅವರ ಸಾಧನೆ ಕುರಿತು ಅರಿವು ಮೂಡಿಸುವ ಮೂಲಕ ಸಂವಿಧಾನ ಶಿಲ್ಪಿಗೆ ಗೌರವ ಸಲ್ಲಿಸಬೇಕಿದೆ. ಭಾರತ ಸಂವಿಧಾನ ವಿಶ್ವದಲ್ಲಿಯೇ ಅತ್ಯಂತ ಶ್ರೇಷ್ಠ ಸಂವಿಧಾನ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂಬುದಾಗಿ ಅವರು ಹೇಳಿದರು.
ಪೌರಾಯುಕ್ತರಾದ ಎ.ವಾಸೀಂ ಅವರು ಮಾತನಾಡಿ, ಮಹಾಮಾನವತಾವಾದಿ ಡಾ.ಬಿ.ಆರ್.ಅಂಬೇಡ್ಕರ್ ಅವರು ವಿಶ್ವದ ಶ್ರೇಷ್ಠ ಮಾನವತಾವಾದಿಯಾಗಿದ್ದು, ಅವರ ಚಿಂತನೆ, ಆಶಯಗಳನ್ನು ಯುವಜನತೆ ಅರಿತು ಸಶಕ್ತ ದೇಶ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂಬುದಾಗಿ ಅವರು ಹೇಳಿದರು.

ನಗರದ ವಾಣಿ ಸಕ್ಕರೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಅಂಬೇಡ್ಕರ್ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಸಂವಿಧಾನದ ಕುರಿತ ಜಾಗೃತಿ ಜಾಥದಲ್ಲಿ ಭಾಗವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣಾಧಿಕಾರಿ ದಿನೇಶ್, ಡಿ.ವೈ.ಎಸ್.ಪಿ ಶಿವಕುಮಾರ್, ಪ್ರಾಚಾರ್ಯ ಡಾ.ಮಹೇಶ್, ಸಿ.ಡಿ.ಪಿ.ಒ.ರಾಘವೇಂದ್ರ ರೈತ ಸಂಘದ ಜಿಲ್ಲಾಧ್ಯಕ್ಷರಾದ ಕೆ.ಟಿ.ತಿಪ್ಪೇಸ್ವಾಮಿ, ದಲಿತ ಮುಖಂಡರಾದ ದಯಾನಂದ್, ಜೀವೇಶ್, ಪ್ರದೀಪ್, ಬಸವರಾಜ್, ಜಿ.ಎಲ್.ಮೂರ್ತಿ, ಕಲ್ಲಹಟ್ಟಿ ಹರೀಶ್, ಜ್ಞಾನೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ರಮೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

