March 2, 2026
00002

ಹಿರಿಯೂರು :

ಗ್ರಾಮೀಣ ವಾಣಿಜ್ಯ ಚಟುವಟಿಕೆಗಳಿಗೆ ಬಲ ನೀಡುವ ಈ ಮಳಿಗೆಗಳ ಮೂಲಕ ಸ್ಥಳೀಯ ರೈತರು, ವ್ಯಾಪಾರಿಗಳು ಮತ್ತು ಮಹಿಳಾ ಸ್ವಸಹಾಯ ಗುಂಪುಗಳಿಗೆ ಹೊಸ ಅವಕಾಶಗಳು ಲಭ್ಯವಾಗಲಿದ್ದು, ಅಭಿವೃದ್ಧಿಯ ಹಾದಿಯಲ್ಲಿ ಯಲ್ಲದಕೆರೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.

ತಾಲೂಕಿನ ಯಲ್ಲದಕೆರೆ ಗ್ರಾಮ ಪಂಚಾಯಿತಿಯಲ್ಲಿ ನಿರ್ಮಿಸಲಾದ ನೂತನ ವಾಣಿಜ್ಯ ಮಳಿಗೆ ಹಾಗೂ ಕೃಷಿ ಪತ್ತಿನ ಸಹಕಾರ ಸಂಘದ ಮಳಿಗೆಗಳನ್ನು ಉದ್ಘಾಟಿಸಿ, ನಂತರ ಅವರು ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಸ್ಥಳೀಯ ಸಾರ್ವಜನಿಕರು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

About The Author

Leave a Reply

Your email address will not be published. Required fields are marked *