
ಹಿರಿಯೂರು:
ನಗರದ ಪ್ರಸ್ತುತ ಹೂವಿನ ಮಾರುಕಟ್ಟೆಯಿಂದ ಸಾರ್ವಜನಿಕರಿಗೆ ರಸ್ತೆ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ, ಹೂವಿನ ಮಾರುಕಟ್ಟೆಯನ್ನು ಇದೇ ಸ್ಥಳದಲ್ಲಿ ಮುಂದುವರಿಸಬೇಕೋ ಅಥವಾ ಸ್ಥಳಾಂತರ ಮಾಡಬೇಕೋ ಎಂಬ ವಿಷಯ ಕುರಿತು ಸ್ಪಷ್ಟತೆ ನೀಡಲು ಸೂಚಿಸಿದ್ದೇನೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ರೈತ ಮುಖಂಡರಾದ ಕಸವನಹಳ್ಳಿ ರಮೇಶ್ ಹಾಗೂ ತಾಲ್ಲೂಕಿನ ಹೂಬೆಳೆಗಾರ ರೈತರನ್ನು ಭೇಟಿ ಮಾಡಿ, ರೈತರ ಸಮಸ್ಯೆಗಳು ಹಾಗೂ ಹೂವಿನ ಮಾರುಕಟ್ಟೆ ವ್ಯವಸ್ಥೆ ಕುರಿತಾಗಿ ಅವರೊಂದಿಗೆ ಚರ್ಚೆ ನಡೆಸಿ ನಂತರ ಅವರು ಮಾತನಾಡಿದರು.

ಈ ಹಿನ್ನೆಲೆಯಲ್ಲಿ ನಗರಸಭೆಯ ಆಯುಕ್ತರು,ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರುಗಳು, ಕೌನ್ಸಿಲರ್ ಗಳು ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಸಭೆನಡೆಸಿ ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಸೂಕ್ತ ತೀರ್ಮಾನವನ್ನು ಕೈಗೊಳ್ಳಲು ಸೂಚಿಸಿದ್ದೇನೆ ಎಂಬುದಾಗಿ ಅವರು ಹೇಳಿದರು.

ಈ ಸಂದರ್ಭದಲ್ಲಿ ನಗರಸಭೆಯ ಅಧ್ಯಕ್ಷರಾದ ಬಾಲಕೃಷ್ಣ, ಸ್ಥಾಯಿ ಸಮಿತಿಯ ಅಧ್ಯಕ್ಷರು, ನಗರಸಭೆಯ ಪೌಯುಕ್ತರಾದ ಎ.ವಾಸೀಂ, ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಹಾಗೂ ರೈತ ಮುಖಂಡ ಕಸವನಹಳ್ಳಿ ರಮೇಶ್, ಹಾಗೂ ರಾಜ್ಯ ರೈತಮುಖಂಡರಾದ ಕೆ.ಸಿ.ಹೊರಕೇರಪ್ಪ, ತಾಲ್ಲೂಕು ರೈತಸಂಘದ ಅಧ್ಯಕ್ಷ ಬ್ಯಾಡರಹಳ್ಳಿ ಶಿವಕುಮಾರ್ ಸೇರಿದಂತೆ ವಿವಿಧ ರೈತ ಮುಖಂಡರುಗಳು, ಹೂಬೆಳೆಗಾರರೈತರು ಹಾಗೂ ಕಾರ್ಯಕರ್ತರು, ಉಪಸ್ಥಿತರಿದ್ದರು.
