March 3, 2026
001

ಹಿರಿಯೂರು:

ಮಾಜಿ ಸಚಿವರು, ಹಾಲಿ ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪಅವರ ನಿಧನದ ಸುದ್ಧಿ ತಿಳಿದು ಅತೀವ ದುಃಖವಾಯಿತು ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸಮಾಜ ಸೇವೆಗೆ ತಮ್ಮ ಜೀವನವನ್ನೇ ಸಮರ್ಪಿಸಿಕೊಂಡಿದ್ದ ಶಾಮನೂರು ಶಿವಶಂಕರಪ್ಪ ಅವರು ವಿಶೇಷವಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡಿದ  ಮಹಾನ್ ನಾಯಕರು. ಅವರ ಅಗಲಿಕೆಯಿಂದ ನಾಡಿಗೆ ಮಾತ್ರವಲ್ಲ, ಕಾಂಗ್ರೆಸ್ ಪಕ್ಷಕ್ಕೂ ತುಂಬಲಾರದ ನಷ್ಟವಾಗಿದೆ. ಎಂದರಲ್ಲದೆ,

ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ.ಅವರ ಕುಟುಂಬ ವರ್ಗಕ್ಕೆ  ಬಂಧುಮಿತ್ರರಿಗೆ ಹಾಗೂ ಬೆಂಬಲಿಗರಿಗೆ ಈ ದುಃಖ ಸಹಿಸುವ ಶಕ್ತಿ ನೀಡಲೆಂದು ಈ ಸಂದರ್ಭದಲ್ಲಿ ಅವರು  ಪ್ರಾಥಿಸಿದ್ದಾರೆ.

About The Author

Leave a Reply

Your email address will not be published. Required fields are marked *