
ಹಿರಿಯೂರು:
ತಾಲ್ಲೂಕಿನ ಕಲ್ಲುವಳ್ಳಿ ಭಾಗದ ಪ್ರತಿಭಾವಂತ ವಿದ್ಯಾರ್ಥಿನಿಯಾದ ಬಿ.ನಾಗವೇಣಿ ಇವರು 2024-25 ನೇ ಸಾಲಿನಲ್ಲಿ ಮಲ್ಲಾಡಿಹಳ್ಳಿ ಶತಮಾನೋತ್ಸವ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಬಿ.ಪಿಯಡ್. ಪದವಿಯಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಮಟ್ಟದಲ್ಲಿ ಪ್ರಥಮ ರ್ಯಾಂಕ್ ಪಡೆಯುವ ಮೂಲಕ ಬಂಗಾರದ ಪದಕ ಪಡೆದಿದ್ದಾರೆ.
ವಿದ್ಯಾರ್ಥಿನಿಯಾದ ಬಿ.ನಾಗವೇಣಿ ಇವರು ಯಲ್ಲದಕೆರೆಯ ಶ್ರೀಜ್ಞಾನ ಜ್ಯೋತಿ ಪ್ರೌಢ ಶಾಲೆಯಲ್ಲಿ ತಮ್ಮ ಪ್ರೌಢ ಶಿಕ್ಷಣ ಮುಗಿಸಿ, ನಂತರ 2024-25 ನೇ ಸಾಲಿನಲ್ಲಿ ಮಲ್ಲಾಡಿಹಳ್ಳಿ ಶತಮಾನೋತ್ಸವ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಬಿ.ಪಿಯಡ್. ಪದವಿಯಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಮಟ್ಟದಲ್ಲಿ ಪ್ರಥಮ ರ್ಯಾಂಕ್ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.

ಬಂಗಾರದ ಪದಕ ವಿದ್ಯಾರ್ಥಿನಿಯಾದ ಬಿ.ನಾಗವೇಣಿ ರವರಿಗೆ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪ ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಅಭಿನಂದಿಸಿದ್ದಾರೆ.
