
ಹಿರಿಯೂರು:
ಪೋಲಿಯೋ ಮುಕ್ತ ಭಾರತ ನಿರ್ಮಾಣಕ್ಕೆ ಪ್ರತಿಯೊಬ್ಬರೂ ನಿಮ್ಮ ಮನೆಯಲ್ಲಿರುವ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ತಪ್ಪದೇ 2 ಹನಿ ಪೋಲಿಯೋ ಲಸಿಕೆಯನ್ನು ಹಾಕಿಸುವ ಮೂಲಕ ನಿಮ್ಮ ಮಗುವನ್ನು ಪೋಲಿಯೋ ರೋಗದಿಂದ ರಕ್ಷಿಸಬೇಕು ಎಂಬುದಾಗಿ ನಗರಸಭಾ ಸದ್ಯಸರಾದ ಎಂ.ಡಿ.ಸಣ್ಣಪ್ಪ ಹೇಳಿದರು.
ತಾಲ್ಲೂಕಿನ ನಂಜಯ್ಯನಕೊಟ್ಟಿಗೆ ಆಶ್ರಯ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ನಗರಸಭಾ ಸದ್ಯಸರಾದ ಎಂ.ಡಿ.ಸಣ್ಣಪ್ಪ, ಹಿರಿಯ ಆರೋಗ್ಯ ಮಹಿಳಾ ಸಹಾಯಕಿ ಸೌಮ್ಯ, ಅಂಗನವಾಡಿ ಕಾರ್ಯಕರ್ತೆಯಾದ ಕ್ರಿಸ್ಟಿಜೋನಿಟ್, ಸಹಾಯಕಿ ಮೇರಿ, ಮಕ್ಕಳು ಮತ್ತು ಪೋಷಕರು ಭಾಗವಹಿಸಿದ್ದರು.

